ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಹೆಚ್ಚುವರಿ 30 ಲಕ್ಷ ಲೀ ಸೀಮೆಎಣ್ಣೆ ಬಿಡುಗಡೆ
ಉಡುಪಿ, ನವೆಂಬರ್ 2: ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ, ರಾಜ್ಯಕ್ಕೆ ಹೆಚ್ಚುವರಿಯಾಗಿ 30 ಲಕ್ಷ ಲೀಟರ್ ಸೀಮೆ ಎಣ್ಣೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿರಲಿಲ್ಲ. ಅದಕ್ಕಾಗಿ ಈ ಸಮಸ್ಯೆಯ ಬಗ್ಗೆ ಕೇಂದ್ರ ಸರಕಾರದ ಗಮನವನ್ನು ಸೆಳೆಯಲಾಗಿತ್ತು.
ಹಿಂಗಾರು ರಸಗೊಬ್ಬರ ಸಬ್ಸಿಡಿಗೆ ಕೇಂದ್ರದ ಅನುಮೋದನೆ
ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು. ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಯಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಮನವಿ ಸಲ್ಲಿಸಿತ್ತು.
ಕರಾವಳಿಯ ಮೀನುಗಾರರ ಈ ಮನವಿಯನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವರ ಗಮನಕ್ಕೆ ತಂದು, ಅತೀ ಶೀಘ್ರದಲ್ಲಿ ಹೆಚ್ಚುವರಿ ಸೀಮೆ ಎಣ್ಣೆಯನ್ನು ಕರ್ನಾಟಕ ರಾಜ್ಯಕ್ಕೆ ಬಿಡುಗಡೆಗೊಳಿಸಿ, ಕರಾವಳಿಯ ಮೀನುಗಾರರ ಹಿತವನ್ನು ಕಾಯುವಂತೆ ಕೇಳಿಕೊಂಡಿದ್ದರು.
ಕೇಂದ್ರ ಕೃಷಿ ರಾಜ್ಯ ಸಚಿವರ ಮನವಿಯನ್ನು ಪುರಸ್ಕರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಬುಧವಾರ ಕರ್ನಾಟಕ ಸರಕಾರಕ್ಕೆ 2022-23ನೇ ಪಾಲಿನ 3000KL (30 ಲಕ್ಷ ಲೀಟರ್) ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಈ ಹೆಚ್ಚುವರಿಯಾಗಿ ದೊರೆತಿರುವ ಸೀಮೆ ಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ರಾಜ್ಯದ ವಿತರಣಾ ವ್ಯವಸ್ಥೆಯು ವಿತರಿಸಲಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದು, ಕರಾವಳಿಯ ಮೀನುಗಾರರ ಬೇಡಿಕೆಯನ್ನು ತ್ವರಿತವಾಗಿ ಈಡೇರಿಸಿ, ನಾಡ ದೋಣಿ ಮೀನುಗಾರಿಕೆಗೆ ಅಗತ್ಯವಿರುವ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಪೆಟ್ರೋಲಿಯಂ ಸಚಿವರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಹೆಚ್ಚುವರಿಯಾಗಿ ದೊರೆತಿರುವ ಸೀಮೆ ಎಣ್ಣೆಯನ್ನು ಮೀನುಗಾರಿಕಾ ಉದ್ದೇಶಕ್ಕೆ ರಾಜ್ಯದ ವಿತರಣಾ ವ್ಯವಸ್ಥೆಯು ವಿತರಿಸಲಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಪರಿಸರ ಮಾಲಿನ್ಯ ತಡೆಯಲು ಮನವಿ; ಮೀನುಗಾರರಿಗೆ ಮುಂದಿನ ದಿನಗಳಲ್ಲಿ ಪೆಟ್ರೋಲ್ ಇಂಜಿನ್ ಪೂರೈಕೆ ಮಾಡುತ್ತೇವೆ. ಪೆಟ್ರೋಲ್ ಇಂಜಿನ್ ಬಳಸಿ ನಾಡದೋಣಿ ಮೀನುಗಾರಿಕೆಯನ್ನು ಮಾಡಬೇಕು. ಕಡಿಮೆ ಸೀಮೆ ಎಣ್ಣೆಯನ್ನು ಬಳಸಬೇಕು ಮಾಲಿನ್ಯ ತಡೆಯಬೇಕಾಗಿದೆ. ತಾತ್ಕಾಲಿಕವಾಗಿ ಆಗಿರುವ ಸಮಸ್ಯೆಯನ್ನು ಕೂಡಲೇ ಪರಿಹರಿಸುತ್ತೇವೆ. ಮುಂದಿನ ಒಂದೆರಡು ದಿನಗಳಲ್ಲಿ ಸೀಮೆ ಎಣ್ಣೆ ಸಿಗಲಿದೆ. ಆದರೆ ಮುಂದಿನ ದಿನಗಳಲ್ಲಿ ಪೆಟ್ರೋಲ್ ಇಂಜಿನ್ ಬಳಕೆಯನ್ನು ಹೆಚ್ಚು ಮಾಡುತ್ತೇವೆ ಎಂದು ಮೀನುಗಾರಿಕೆ ಸಚಿವ ಅಂಗಾರ ತಿಳಿಸಿದ್ದಾರೆ.
ಮಲ್ಪೆ ಬಂದರಿನಲ್ಲಿ ನಾಲ್ಕು ಕಡೆ ಹೂಳೆತ್ತುವ ಬಗ್ಗೆ ಈಗಾಗಲೇ ಕಾರ್ಯ ಯೋಜನೆ ಮಾಡಿದ್ದೇವೆ. ಈ ಸಂಬಂಧ ಕೆಲವರು ನ್ಯಾಯಾಲಯದ ಮೆಟ್ಟಿಲೇರಿ ಇರುವುದರಿಂದ ಇದು ವಿಳಂಬವಾಗಿದೆ. ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಯಾಗುತ್ತೇನೆ ಎರಡು ಮೂರು ದಿನ ಇದರ ಒಳಗೆ ಈ ಬಗ್ಗೆ ತೀರ್ಮಾನವನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.