ಡಿಕೆಶಿ ಸಂಕಷ್ಟ ನಿವಾರಣೆಗೆ ಕೊಲ್ಲೂರು ಮೂಕಾಂಬಿಕೆಯಲ್ಲಿ ಚಂಡಿಕಾ ಹೋಮ!

ಉಡುಪಿ, ಸೆಪ್ಟೆಂಬರ್ 9: ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಗುತ್ತಿದೆ.

ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇಂದು ಬೆಳಿಗ್ಗಿನಿಂದಲೇ ಚಂಡಿಕಾ ಹೋಮ ನಡೆಯುತ್ತಿದೆ.ಇವತ್ತು ಮುಂಜಾನೆಯೇ ಡಿ.ಕೆ.ಶಿ ಕುಟುಂಬದವರಿಂದ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ನಡೆಸಲಾಯಿತು.

ಬಳಿಕ ಡಿಕೆಶಿ ದೊಡ್ಡಪ್ಪ, ಚಿಕ್ಕಪ್ಪನ ಕುಟುಂಬ ಸದಸ್ಯರು ಚಂಡಿಕಾ ಹೋಮದಲ್ಲಿ ಭಾಗಿಯಾದರು. ಚಂಡಿಕಾ ಹೋಮದ ಹರಕೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೊಂಡಿದ್ದರು ಎನ್ನಲಾಗಿದೆ.

Chandika Homa Performed In Kolluru Mookambika Temple By Dk shivakumar Relatives

ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನಡೆಸಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಕಷ್ಟಗಳೆಲ್ಲ ಪರಿಹಾರವಾಗಿ ಡಿ.ಕೆ ಶಿವಕುಮಾರ್ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+