ವಂಚನೆ ಪ್ರಕರಣ: ಬಂಧನದ ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಚೈತ್ರ ಕುಂದಾಪುರ!
ಉಡುಪಿ ಸೆಪ್ಟೆಂಬರ್ 13: ಹಣ ವಂಚನೆ ಪ್ರಕರಣದ ಆರೋಪಿ ಚೈತ್ರ ಕುಂದಾಪುರ ಸಿಸಿಬಿ ಬಂಧನದ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿಯಲ್ಲಿ ನಿನ್ನೆ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿದ ಬಳಿಕ ಅವರು ಕೈ ಬಳೆ ಒಡೆದು ಉಂಗುರು ನುಂಗಲು ಪ್ರಯತ್ನ ಪಟ್ಟರು ಎನ್ನುವ ಮಾಹಿತಿ ಲಭ್ಯವಾಗಿದೆ.
ಇಂದು ಸಂಜೆ ಚೈತ್ರ ಕುಂದಾಪುರ ಅವರನ್ನು ಜಡ್ಜ್ ಮುಂದೆ ಹಾಜರುಪಡಿಸಲಾಗುತ್ತದೆ. ಇದಕ್ಕಾಗಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ.
ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಹಿಂದೂಪರ ವಾಗ್ಮಿ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ನಿನ್ನೆ ರಾತ್ರಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ಮೂಲಕ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಸುಮಾರು ಏಳು ಕೋಟಿ ರೂಪಾಯಿಯನ್ನು ಚೈತ್ರಾ ಕುಂದಾಪುರ ವಂಚನೆ ಮಾಡಿದ್ದಾರೆ. ಉದ್ಯಮಿ ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರ ಮುಗ್ಧತೆಯನ್ನು ಬಳಸಿಕೊಂಡು ವಂಚಕಿ ಮೋಸ ಮಾಡಿದ್ದಾಳೆ.

ಕೇಂದ್ರದ ನಾಯಕರು, ಆರೆಸ್ಸೆಸ್ ಪ್ರಮುಖರ ಹೆಸರಿನಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಈಕೆಯೊಂದಿಗೆ ನಾಲ್ಕೈದು ಜನರ ತಂಡ ಪಂಗನಾಮ ಹಾಕಿದೆ. ಬೈಂದೂರು ಬಿಜೆಪಿಯ ಟಿಕೆಟ್ ಪಕ್ಕ ಮಾಡಿಕೊಡುವುದಾಗಿ ನಂಬಿಸಿದ್ದ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್, ಪ್ರಸಾದ್ ಸದ್ಯ ಪೊಲೀಸರ ವಶದಲ್ಲಿ ಇದ್ದಾರೆ.
ಚೈತ್ರಾ ಕುಂದಾಪುರ ಅವರು ಗೋವಿಂದಬಾಬು ಪೂಜಾರಿ ಎಂಬುವವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು.
ಗೋವಿಂದಬಾಬು ಬೆಂಗಳೂರಿಗೆ ಬಂದಾಗಲೆಲ್ಲಾ, ಚೈತ್ರಾ ಕುಂದಾಪುರ ತನ್ನ ಪರಿಚಯಸ್ತರಿಗೆ ಒಳ್ಳೆ ಬಟ್ಟೆ ಹಾಕಿಸಿ, ಇವರೇ ಹೈಕಮಾಂಡ್ ನಾಯಕರು ಎಂದು ನಂಬಿಸುತ್ತಿದ್ದರು. ಇವರು ಹೇಳಿದ ಮೇಲೆ ಟಿಕೆಟ್ ನಿಮಗೆ ಸಿಗುತ್ತದೆ ಎಂದು ಹೇಳಿದ್ದರು.
ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಟಿಕೆಟ್ ಸಿಗುತ್ತೆ ಅನ್ನುವ ಆಸೆಗೆ ಕೇಳಿದ್ಷಷ್ಟು ಹಣ ಕೊಟ್ಟಿದ್ದರು.
ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು ನಾಲ್ಕು ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್ ಸಿಗಲಿಲ್ಲ. ಬಳಿಕ ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.












Click it and Unblock the Notifications