ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೇಜಾವರ ಸ್ವಾಮೀಜಿ ಆಶೀರ್ವಾದ ಪಡೆದ ಸಿಎಂ ಕುಮಾರಸ್ವಾಮಿ

|
Google Oneindia Kannada News

ಉಡುಪಿ, ಏಪ್ರಿಲ್ 07:ಉಡುಪಿ ಶ್ರೀ ಕೃಷ್ಣ ಮಠಕ್ಕೆ ಇಂದು ಭಾನುವಾರ ಸಿಎಂ ಕುಮಾರಸ್ವಾಮಿ ಭೇಟಿ ನೀಡಿ ಪ್ರಾರ್ಥಿಸಿದರು. ಈ ವೇಳೆ ಸಿಎಂ ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣನ ದರ್ಶನ ಮಾಡಿದರು.

ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರನ್ನು ಭೇಟಿಯಾದ ಸಿಎಂ, ನಂತರ ಪೇಜಾವರ ಮಠಕ್ಕೆ ತೆರಳಿ ವಿಶ್ವೇಶತೀರ್ಥ ಶ್ರೀಪಾದರು, ವಿಶ್ವಪ್ರಸನ್ನ ಸ್ವಾಮೀಜಿಯವರನ್ನು ಭೇಟಿಯಾದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಈ ಬಾರಿ ಚುನಾವಣೆಗೆ ಆಶೀರ್ವಾದ ಮಾಡಿ ಎಂದು ಪೇಜಾವರ ಶ್ರೀಗಳಲ್ಲಿ ಸಿಎಂ ನಿವೇದನೆ ಮಾಡಿಕೊಂಡರು. ಈ ಸಂದರ್ಭದಲ್ಲಿ ಪೇಜಾವರ ಮಠದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿ, ನೀಲಾವರ ಗೋಶಾಲೆಯ ಬಗ್ಗೆ ಸಿಎಂ ಮಾಹಿತಿ ಪಡೆದರು.

Chief Minister Kumaraswamy visited Sri Krishna Matha

ಪೇಜಾವರಶ್ರೀಗಳು ಮೂರು ಕಡೆ ಗೋ ಶಾಲೆ ನಿರ್ಮಾಣಕ್ಕೆ ಕುಮಾರಸ್ವಾಮಿ ಅವರ ಬಳಿ ಒತ್ತಾಯಿಸಿದಾಗ ಈಗ ನೀತಿಸಂಹಿತೆ ಜಾರಿಯಲ್ಲಿದೆ.ಚುನಾವಣೆ ನಂತರ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದರು.

English summary
Chief Minister Kumaraswamy visited Sri Krishna Matha today.Then he discussed with Pejavara Shree.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X