ಬಾಲಕಿಯ ಅತ್ಯಾಚಾರಿಗೆ 27 ವರ್ಷ ಕಠಿಣ ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ

ಉಡುಪಿ ಏಪ್ರಿಲ್ 13: ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಒಂದರಲ್ಲಿ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ 27 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಈ ಉಡುಪಿ ಸಮೀಪದ ಪೆರಂಪಳ್ಳಿಯ ನಿವಾಸಿ ಅರುಣ ಆಚಾರಿ(32) 2016ರ ಜು.16ರಂದು ಬೆಳಗ್ಗೆ ಶಾಲೆಗೆ ಹೊರಟಿದ್ದ ಬುದ್ಧಿ ಮಾಂದ್ಯ ಬಾಲಕಿಯನ್ನು ಅಪಹರಿಸಿ ತನ್ನ ಮನೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ 27 ವರ್ಷ ಕಠಿನ ಸಜೆ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

ಅರುಣ ಆಚಾರಿ 2016ರ ಜು.16ರಂದು ಬೆಳಗ್ಗೆ ಶಾಲೆಗೆ ಹೊರಟಿದ್ದ ಬುದ್ಧಿಯ ಮಾಂದ್ಯ ಬಾಲಕಿಯನ್ನು ಅಪಹರಿಸಿದ್ದ . ನಂತರ ಆಕೆಯನ್ನು ಸಮೀಪದ ಮಣಿಪಾಲದ ಲಾಡ್ಜ್ ಕರೆದೊಯ್ದು. ಅಲ್ಲಿ ರೂಮ್‌ ಸಿಗದಿದ್ದಾಗ ತನ್ನ ಮನೆಗೆ ಕರೆ ತಂದು ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿದೆ. ಈ ಕರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Child Rape accused sentenced 27 year of imprisonment

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಅರುಣ ಆಚಾರಿ ಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಲಯ 30 ಸಾಕ್ಷಿಗಳ ವಿಚಾರಣೆ ನಡೆದಿತ್ತು. ವಿಚಾರಣೆ ಸಂದರ್ಭ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಅರುಣ್ ಆಚಾರಿ ಗೆ 27 ವರ್ಷ ಕಠಿನ ಸಜೆ ಶಿಕ್ಷೆ ವಿಧಿಸಿ ತೀರ್ಪು ನೀಡಿದರು. ಶಿಕ್ಷೆ ಪ್ರಕಟಿಸುತ್ತಿದ್ದಂತೆಯೇ ಕಟಕಟೆಯಲ್ಲಿದ್ದ ಅಪರಾಧಿ ಕಣ್ಣೀರಿಟ್ಟ ಎಂದು ಹೇಳಲಾಗಿದೆ.

ಉಡುಪಿ ನ್ಯಾಯಾಲಯ ಅತ್ಯಾಚಾರ ಪ್ರಕರಣಕ್ಕೆ 10 ವರ್ಷ ಕಠಿನ ಸಜೆ ಮತ್ತು 30 ಸಾವಿರ ರೂಪಾಯಿ ದಂಡ, ಪೋಕ್ಸೋ ಪ್ರಕರಣದಡಿ 10 ವರ್ಷ ಕಠಿನ ಸಜೆ ಮತ್ತು 50 ಸಾವಿರ ರೂಪಾಯಿ ದಂಡ, ಅಪಹರಣ ಪ್ರಕರಣಕ್ಕೆ 7 ವರ್ಷಗಳ ಕಠಿನ ಸಜೆ ಮತ್ತು 30 ಸಾವಿರ ರೂಪಾಯಿ ದಂಡ ವಿಧಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+