Get Updates
Get notified of breaking news, exclusive insights, and must-see stories!

ಉಡುಪಿಯಲ್ಲೂ ಮಾಧ್ಯಮಗಳ ಮೇಲೆ ಮುನಿಸು ತೋರಿದ ಕುಮಾರಸ್ವಾಮಿ

ಉಡುಪಿ, ಏಪ್ರಿಲ್ 29:ಎಡೆಬಿಡದೆ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ‌ ಮಾಜಿ‌ ಪ್ರಧಾನಿ ಎಚ್ ಡಿ‌ ದೇವೇಗೌಡ ಅವರು ಪ್ರಕೃತಿ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಹಾಗೂ ದೇವೇಗೌಡ ಉಡುಪಿಯ ಹೆಲ್ತ್ ರೆಸಾರ್ಟ್ ಗೆ ಕಳೆದ ರಾತ್ರಿ ಆಗಮಿಸಿದರು.

ಈ ಮೊದಲು ಮಾಜಿ ಶಾಸಕ ಗೋಪಾಲ ಪೂಜಾರಿ ಮಗಳ ಮದುವೆಗೆ ಆಗಮಿಸಿದ್ದರು. ಸಿಎಂ ಉಡುಪಿ ಸಮೀಪದ ಕಾಪುವಿನ ಮೂಳೂರಿನಲ್ಲಿರುವ ಸಾಯಿ ರಾಧಾ ರೆಸಾರ್ಟ್ ನಲ್ಲೇ ನಾಲ್ಕೈದು ದಿನ ತಂಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಕಳೆದ ರಾತ್ರಿ (ಏ.28) ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಕಾಪುವಿನ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

CM Kumaraswamy, HD Deve Gowda visits Kapu health resort

ಕಳೆದ ಭಾನುವಾರ ಸಿಎಂ ಕುಮಾರಸ್ವಾಮಿ ಚುನಾವಣಾ ಪ್ರಚಾರ ಮುಗಿಸಿಕೊಂಡು ಎರಡು ದಿನ‌ ಇದೇ ರೆಸಾರ್ಟ್ ನಲ್ಲಿ ತಂಗಿದ್ದರು. ಪ್ರಾಥಮಿಕ ಚಿಕಿತ್ಸೆ ಪೂರೈಸಿ ವಾರದ ನಂತರ ಬರುವುದಾಗಿ ತಿಳಿಸಿದ್ದರು. ಅಂತೆಯೇ ತಂದೆ ದೇವೇಗೌಡ ಜೊತೆಗೆ ಮತ್ತೆ ಕುಮಾರಸ್ವಾಮಿ ಪುನರಾಗಮಿಸಿದ್ದಾರೆ. ಈ ಹೆಲ್ತ್ ರಿಸಾರ್ಟ್ ನಲ್ಲಿ ಪಂಚ ಕರ್ಮ ಚಿಕಿತ್ಸೆ ಸೇರಿದಂತೆ ವಿವಿಧ ಆಯುರ್ವೇದ ಚಿಕಿತ್ಸೆಗೆ ಇವರು ಒಳಪಡಲಿದ್ದಾರೆ.

ಮಾಧ್ಯಮಗಳ ಮೇಲೆ ತಮ್ಮ ಮುನಿಸು ಮುಂದುವರೆಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಪು ಹೆಲ್ತೆ ರೆಸಾರ್ಟ್ ಭೇಟಿಯನ್ನು ಸಂಪೂರ್ಣ ಖಾಸಗಿಯಾಗಿಯೇ ಕಳೆಯಲು ಬಯಸಿದ್ದಾರೆ. ಹಾಗಾಗಿ ರೆಸಾರ್ಟ್ ನ ಅಸುಪಾಸಿಗೂ ಯಾರೂ ಬರದಂತೆ ಪೊಲೀಸರಿಗೆ ಸೂಚಿಸಲಾಗಿದೆ.

CM Kumaraswamy, HD Deve Gowda visits Kapu health resort

ಭಾನುವಾರ ರಾತ್ರಿ ಚಿತ್ರೀಕರಣಕ್ಕೆ ತೆರಳಿದ್ದ ಮಾಧ್ಯಮದವರಿಗೆ ಪೊಲೀಸರು ಅಡ್ಡಿಪಡಿಸಿದರು. ಸಾರ್ವಜನಿಕ ರಸ್ತೆಯಲ್ಲೂ ನಿಲ್ಲಲು ಅವಕಾಶ ನಿರಾಕರಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗು ಮಾದ್ಯಮ ಪ್ರತಿನಿಧಿಗೊಂದಿಗೆ ಮಾತಿನ ಚಕಮಕಿಯೂ ನಡೆಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+