ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅನುಮತಿ ಕೋರಿದ ಶಾಸಕರ ಮನವಿಗೆ ಸಿಎಂ ಒಪ್ಪಿಗೆ

ಉಡುಪಿ, ಆಗಸ್ಟ್ 28: ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ ಕೋರಿ ಶಾಸಕ ರಘುಪತಿ ಭಟ್‌ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಮನವಿಗೆ ಸ್ಪಂದಿಸಿರುವ ಬಿ.ಎಸ್‌. ಯಡಿಯೂರಪ್ಪನವರು ಅನುಮತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ.

Recommended Video

      Metro ಸಂಚಾರ ಆರಂಭ! | Oneindia Kannada

      ಈ ಬಗ್ಗೆ ಟ್ವೀಟ್ ಮಾಡಿರುವ ರಘುಪತಿ ಭಟ್‌, ''ದೈವಾರಾಧನೆ, ನೇಮೋತ್ಸವ, ಮಾರಿ ಪೂಜೆ ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ನಾನು ಈ ಹಿಂದೆಯೇ ಸಿಎಂಗೆ ಮನವಿ ಸಲ್ಲಿಸಿದ್ದೆ. ಅದರಂತೆ ಮುಖ್ಯಮಂತ್ರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದು, ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ'' ಎಂದು ತಿಳಿಸಿದ್ದಾರೆ.

      Udupi: CM Yediyurappa Granted Permission For Tulu Nadu Religious Practices

      ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಜನರು ತಮ್ಮದೇ ಸಾಮಾಜಿಕ ಹಾಗೂ ಧಾರ್ಮಿಕ ಆಚರಣೆ ಮತ್ತು ಸಂಸ್ಕೃತಿಯನ್ನು ರೂಡಿಸಿಕೊಂಡು ಬಂದಿದ್ದು ಲಾಕ್‌ಡೌನ್‌ ಕಾರಣದಿಂದ ಈ ಆಚರಣೆಗೆ ಧಕ್ಕೆ ಉಂಟಾಗಿದೆ. ಧಾರ್ಮಿಕ ಸೇವೆಗಳಿಗೆ ನಿಷೇಧ ಹೇರಿದ್ದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟಾಗಿದ್ದಲ್ಲದೇ ನಾಗಸ್ವರ ವಾದಕರು, ಮಡಿವಾಳ, ದರ್ಶನ ಪಾತ್ರಿ, ಮಧ್ಯಸ್ಥರು, ಗರೋಡಿ ವರ್ಗದವವರು, ನಲಿಕೆ ವರ್ಗ, ಪಂಬದ ವರ್ಗದವರು ಸೇರಿ ಸುಮಾರು 600 ಜನರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆ ಈ ಆಚರಣೆಗಳಿಗೆ ಅವಕಾಶ ನೀಡಬೇಕು ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಿಸಲು 10 ಸಾವಿರ ಅನುದಾನ ಮಂಜೂರು ಮಾಡಬೇಕು ಎಂದು ಶಾಸಕ ರಘುಪತಿ ಭಟ್‌ ಮನವಿ ಸಲ್ಲಿಸಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+