ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್ 3ನೇ ಅಲೆ: ಮುಂಜಾಗ್ರತೆಯಾಗಿ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 22: ಕೊರೊನಾ ಮೂರನೇ ಅಲೆಗೂ ಮುನ್ನ ಮುಂಜಾಗ್ರತಾ ಕ್ರಮಮಾಗಿ ಮಕ್ಕಳ ಆರೋಗ್ಯ ತಪಾಸಣೆಗೆ ಸರಕಾರ ಮುಂದಾಗಿದೆ. ಮಂಗಳವಾರ ಈ ಕುರಿತು ಮಾಹಿತಿ ನೀಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, "ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ನಡೆಸುವಂತೆ,'' ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಡಿಯೋ ಸಂವಾದದ ಮೂಲಕ ಉಡುಪಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, "ಮಕ್ಕಳಿಗೆ ಕೋವಿಡ್ ಮೂರನೇ ಅಲೆಯಿಂದ ಯಾವುದೇ ತೊಂದರೆಯಾಗದಂತೆ ತಕ್ಷಣದಿಂದಲೇ ಜಿಲ್ಲೆಯ ಎಲ್ಲ ಶಾಲೆಗಳ ವ್ಯಾಪ್ತಿಯಲ್ಲಿನ ಮಕ್ಕಳ ವಿವರಗಳನ್ನು ಸಂಗ್ರಹಿಸಿ,'' ಎಂದು ಸೂಚಿದರು.

 Udupi: Conduct School Kids Health Checkup As A Precaution To Face 3rd Wave Of Covid-19; Minister Basavaraj Bommai

ಉಡುಪಿ ವಿಶೇಷ; 151 ಅನಾಥ ಶವದ ಅಂತ್ಯ ಸಂಸ್ಕಾರ ಮಾಡಿದ ನಾಗರಿಕ ಸಮಿತಿ ಉಡುಪಿ ವಿಶೇಷ; 151 ಅನಾಥ ಶವದ ಅಂತ್ಯ ಸಂಸ್ಕಾರ ಮಾಡಿದ ನಾಗರಿಕ ಸಮಿತಿ

"ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಯಲ್ಲಿಯೇ ಅವರ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಿ. ತಪಾಸಣಾ ಸಂದರ್ಭದಲ್ಲಿ ಒಬ್ಬರು ಎಂಬಿಬಿಎಸ್ ವೈದ್ಯರು, ಆಯುಷ್ ವೈದ್ಯರು ಮತ್ತು ಮಕ್ಕಳ ತಜ್ಞರನ್ನು ನಿಯೋಜಿಸಿ. ಪ್ರತಿ ಗ್ರಾಮಗಳಲ್ಲಿನ ಶಾಲೆಗಳಿಗೆ ಭೇಟಿ ನೀಡಲು ಯೋಜನೆ ರೂಪಿಸಿ,'' ಎಂದು ಆದೇಶಿಸಿದ್ದಾರೆ.

 Udupi: Conduct School Kids Health Checkup As A Precaution To Face 3rd Wave Of Covid-19; Minister Basavaraj Bommai

Recommended Video

ಎಚ್ಚರಿಕೆ! ಭಾರತದಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ವೈರಸ್:ರಾಜ್ಯದಲ್ಲಿ 2 ಕೇಸ್ ಪತ್ತೆ | Oneindia Kannada

"ಮಕ್ಕಳ ಆರೋಗ್ಯ ತಪಾಸಣೆ ಸಂದರ್ಭದಲ್ಲಿ ಮಕ್ಕಳಲ್ಲಿನ ಅಪೌಷ್ಠಿಕತೆ ಹಾಗೂ ಇನ್ನಿತರೆ ಸಮಸ್ಯೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯವಿರುವ ಮಕ್ಕಳಿಗೆ ಸ್ಥಳದಲ್ಲಿ ಉಚಿತವಾಗಿ ಅಗತ್ಯವಿರುವ ಔಷಧಗಳನ್ನು ನೀಡಲು ಕ್ರಮ ಕೈಗೊಳ್ಳುವಂತೆಯೂ,'' ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

English summary
Udupi: Conduct school kids health checkup as a precaution to face 3rd wave of covid-19- Minister Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X