ಶಾಸಕ ಸುನೀಲ್ ಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ
ಉಡುಪಿ, ಜುಲೈ 12; "ತನ್ನನ್ನು ದೇಶದ್ರೋಹಿ ಎಂದು ಹೇಳಿರುವ ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗುತ್ತದೆ" ಎಂದು ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಹೇಳಿದರು.
ಯೋಧರ ವಿರುದ್ಧವಾಗಿ ಅವಮಾನಕಾರಿಯಾಗಿ ಫೇಸ್‌ಬುಕ್ ಫೋಸ್ಟ್ ಹಾಕಿದ್ದ ಆರೋಪದ ಮೇಲೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಕಾರ್ಕಳ ಪೊಲೀಸರು ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದ ರಾಧಾಕೃಷ್ಣ ನಾಯಕ್ ಹಿರ್ಗಾನ ಕಾರ್ಕಳದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದರು.
"ನನ್ನ ಹೆಸರಿನ ನಕಲಿ ಫೇಸ್‌ಬುಕ್ ಖಾತೆಗಳನ್ನು ತೆರೆದು ಈ ಪೋಸ್ಟ್ ಹಾಕಲಾಗಿದೆ. ಈ ಪೋಸ್ಟ್‌ಗಳಿಗೂ ನನಗೂ ಯಾವುದೇ ಸಂಬಂಧ ಇಲ್ಲದಿದ್ದರೂ ಕಾರ್ಕಳ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ" ಎಂದು ರಾಧಾಕೃಷ್ಣ ಹಿರ್ಗಾನ ಆರೋಪಿಸಿದರು.

"ನಕಲಿ ಫೇಸ್‌ಬುಕ್ ಖಾತೆಗೆ ಸಂಬಂಧಿಸಿದಂತೆ ಬೆಂಗಳೂರಿನ ಉತ್ತರ ಗಂಗಮ್ಮನ ಗುಡಿ ಸೈಬರ್ ಠಾಣೆಯಲ್ಲಿ 2020ರ ಆಗಸ್ಟ್ 26ರಂದು ದೂರು ನೀಡಿದ್ದೇನೆ. ಆದರೂ ಕಾರ್ಕಳ ಠಾಣಾಧಿಕಾರಿ ಶ್ರೀ ಮಧು ಹಲ್ಲೆ ಮಾಡಿದ್ದಾರೆ" ಎಂದು ರಾಧಾಕೃಷ್ಣ ದೂರಿದರು.
"ನನ್ನ ಮೇಲೆ ಯಾವುದೇ ಠಾಣೆಯಲ್ಲಿ ದೇಶ ದ್ರೋಹದ ಕೇಸು ದಾಖಲಾಗದಿದ್ದರೂ ನನ್ನನ್ನು ದೇಶ ದ್ರೋಹಿ ಎಂದು ಶಾಸಕ ಸುನೀಲ್ ಕುಮಾರ್ ಕರೆದಿದ್ದಾರೆ. ಈ ಬಗ್ಗೆ ನ್ಯಾಯಾಲಯದಲ್ಲಿ ಶಾಸಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ" ಎಂದು ರಾಧಾಕೃಷ್ಣ ಹೇಳಿದರು.
"ನನ್ನನ್ನು ದೇಶದ್ರೋಹಿ ಎಂದು ಸಾಬೀತುಪಡಿಸಲಿ. ಇಲ್ಲವಾದಲ್ಲಿ ಮಾಡಿದ ಅವಮಾನಕ್ಕಾಗಿ ಸುನೀಲ್ ಕುಮಾರ್ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ" ಎಂದು ರಾಧಾಕೃಷ್ಣ ಹಿರ್ಗಾನ ತಿಳಿಸಿದರು.
ಪೊಲೀಸರು ಹಲ್ಲೆ ಮಾಡಿದ್ದರು; ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ನಾಯಕರು ಇದನ್ನು ಖಂಡಿಸಿದ್ದರು.
ರಾಧಾಕೃಷ್ಣ ನಾಯಕ್ ಸೈನಿಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಅನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದಾರೆ ಎಂದು ಆರೋಪಿಸಿ ಠಾಣೆಗೆ ಕರೆಸಿ ಹಲ್ಲೆ ಮಾಡಲಾಗಿತ್ತು, ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
-
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಹರ್ಮೂಜ್ ಜಲಸಂಧಿ ಬಂದ್: ಭಾರತಕ್ಕೆ ತಟ್ಟಲಿದೆ ತೈಲ ದರದ ಬಿಸಿ, ಆರ್ಥಿಕತೆಗೂ ಭಾರಿ ಹೊಡೆತ -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
Horoscope March 1: ಈ ರಾಶಿಯವರ ವ್ಯಾಪಾರ, ಆರೋಗ್ಯ ವೃದ್ಧಿ, ಇಂದಿನ ದಿನ ಭವಿಷ್ಯ ಇಲ್ಲಿದೆ. -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಜೋಡಿಯಿಂದ ಕರ್ನಾಟಕ ಸೇರಿ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಅನ್ನದಾನ ಸೇವೆ -
ಮದುವೆ ಪೋಸ್ಟ್ನಲ್ಲಿ ರಶ್ಮಿಕಾ ವಿಶೇಷ ಸಾಲುಗಳು: ಕೊಡಗಿನ ಬೆಡಗಿಯ ವಿದ್ಯಾರ್ಹತೆ ಬಗ್ಗೆ ನಿಮಗೆಷ್ಟು ಗೊತ್ತು? -
Ali Khamenei: ಇರಾನ್ ಸುಪ್ರೀಂ ನಾಯಕ ಖಮೇನಿ ಭೇಟಿ ನೀಡಿದ್ದ ಚಿಕ್ಕಬಳ್ಳಾಪುರದ ಅಲೀಪುರ ಗ್ರಾಮದ ವಿಶೇಷವೇನು -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
ಬೇರೆ ದೇಶಗಳಂತೆ ಭಾರತೀಯರಿಗೆ ಭಯದಿಂದ ನಿದ್ರಿಸುವ ಪರಿಸ್ಥಿತಿ ಅಲ್ಲ: ನಿವೃತ್ತ ಸೇನಾಧಿಕಾರಿ ಸುನೀಲ್ ಕುಮಾರ್ ಶಾಸ್ತ್ರಿ -
Lunar Eclipse: ಮಾರ್ಚ್ 3 ಹುಣ್ಣಿಮೆ: ವರ್ಷದ ಮೊದಲ ಮಹಾ ಚಂದ್ರ ಗ್ರಹಣ – ನಾಲ್ಕು ರಾಶಿಗಳಿಗೆ ಮಹಾ ಶುಭ ಫಲ












Click it and Unblock the Notifications