ಉಡುಪಿ; ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸರ ದೌರ್ಜನ್ಯ
ಉಡುಪಿ, ಜುಲೈ 08; ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಎಂಬುವವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಇದನ್ನು ಖಂಡಿಸಿದ್ದಾರೆ.
ರಾಧಾಕೃಷ್ಣ ನಾಯಕ್ ಸೈನಿಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಅನ್ನು ಫೇಸ್‌ಬುಕ್‌ನಲ್ಲಿ ಹಾಕಿದ್ದಾರೆ ಎಂಬುದು ಆರೋಪ. ರಾಧಾಕೃಷ್ಣ ನಾಯಕ್‌ನನ್ನು ಠಾಣೆಗೆ ಕರೆಸಿ ಹಲ್ಲೆ ಮಾಡಲಾಗಿದ್ದು, ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಾರ್ಕಳ ತಾಲೂಕಿನ ಹಿರ್ಗಾನ ನಿವಾಸಿ ರಾಧಾಕೃಷ್ಣ ನಾಯಕ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿ. ಫೇಸ್‌ಬುಕ್‌ನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಪೋಸ್ಟ್‌ಗಳನ್ನು ಹಾಕಿದ್ದಾರೆ ಎಂದು ಸಹ ಆರೋಪಿಸಲಾಗಿದೆ.
ನಕಲಿ ಖಾತೆ ಮೂಲಕ ಪೋಸ್ಟ್; ಕಿಡಿಗೇಡಿಗಳು ರಾಧಾಕೃಷ್ಣ ನಾಯಕ್ ಹೆಸರಲ್ಲಿ ನಕಲಿ ಖಾತೆ ತೆರೆದು 2020ರ ಆಗಸ್ಟ್‌ನಲ್ಲಿ ಸೈನಿಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಕುರಿತು ರಾಧಾಕೃಷ್ಣ ನಾಯಕ್ ಬೆಂಗಳೂರಿನ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಿದ್ದರು. ಪೊಲೀಸರ ಮನವಿಯಂತೆ 4/9/2020ರಲ್ಲಿ 2ನೇ ದೂರು ಕೊಟ್ಟಿದ್ದರು.
ಈ ಬಗ್ಗೆ ಪೊಲೀಸರು ರಾಧಾಕೃಷ್ಣ ನಾಯಕ್ ಹೇಳಿಕೆಯನ್ನು ಸಹ ಪಡೆದಿದ್ದರು. ಕೋವಿಡ್ ಸಮಯದಲ್ಲಿ ಕೆಲಸ ಕಳೆದುಕೊಂಡ ರಾಧಾಕೃಷ್ಣ ನಾಯಕ್ ಕಾರ್ಕಳಕ್ಕೆ ವಾಪಸ್ ಆಗಿದ್ದರು. 4/4/2021ರಂದು ಹೃದಯಾಘಾತವಾಗಿದ್ದು ಸ್ಟಂಟ್ ಸಹ ಅಳವಡಿಕೆ ಮಾಡಲಾಗಿತ್ತು.
ಕಾರ್ಕಳ ನಗರ ಠಾಣೆ ಪೊಲೀಸರು ರಾಧಾಕೃಷ್ಣ ನಾಯಕ್ ಕರೆ ಮಾಡಿ ಠಾಣೆಗೆ ಬರುವಂತೆ ಸೂಚಿಸಿದ್ದರು. ಗುರುವಾರ ಪೊಲೀಸರು ಹಲ್ಲೆ ನಡೆಸಿದ ಪರಿಣಾಮ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಿಜೆಪಿ ಶಾಸಕರ ಕುಮ್ಮಕ್ಕಿನಿಂದ ಪೊಲೀಸರು ರಾಧಾಕೃಷ್ಣ ನಾಯಕ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮುನೀರ್ ಕಾಟಿಪಳ್ಳ ಫೇಸ್‌ಬುಕ್‌ನಲ್ಲಿ ಆರೋಪಿ ಪೋಸ್ಟ್ ಹಾಕಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಹಲ್ಲೆಯನ್ನು ಖಂಡಿಸಿದ್ದು ಟ್ವೀಟ್ ಮಾಡಿದ್ದಾರೆ.
ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ.
— Siddaramaiah (@siddaramaiah) July 9, 2021
ಇವರ ಅನಾರೋಗ್ಯವನ್ನೂ ಲೆಕ್ಕಿಸದೆ,
ಹಳೆ ಸುಳ್ಳು ಕೇಸ್ ಆಧರಿಸಿ,
ಪೊಲೀಸರು ದೌರ್ಜನ್ಯ ನಡೆಸಿದ್ದಾರೆ.
ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು.@DgpKarnataka pic.twitter.com/8zjPtLu3Lm
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications