Santosh Suicide Case: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಕುರಿತು ತನಿಖೆ ಎಂದ ಆರಗ ಜ್ಞಾನೇಂದ್ರ

ಉಡುಪಿ, ಏಪ್ರಿಲ್ 12: ಉಡುಪಿಯ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಲಾಡ್ಜ್‌ನಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಂತೋಷ್ ಆತ್ಮಹತ್ಯೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್.​​ ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ ಸಂದೇಶವನ್ನು ಎಲ್ಲೆಡೆ ಕಳುಹಿಸಿದ್ದಾರೆ. ಆದರೆ ಈ ಕುರಿತು ಸೂಕ್ತ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ಉಡುಪಿಯ ಶಾಂಭವಿ ಲಾಡ್ಜ್‌ನ ರೂಮ್ ನಂಬರ್ 207ರಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Udupi Contractor Santosh Suicide Case: Home Minister Araga Jnanendra Reaction about Incident

ಗುತ್ತಿಗೆದಾರ ಸಂತೋಷ್ ಪಾಟೀಲ್ ಆರೋಪವೇನು?:

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್.​​ ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್‌ ಆರೋಪದ ಬಗ್ಗೆ ಡೆತ್‌ನೋಟ್ ಬರೆದಿಟ್ಟ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದರು.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+