ದೇಶದಲ್ಲಿ ಕೊರೊನಾ ಜಿಹಾದ್: ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ, ಏಪ್ರಿಲ್ 05: ಕೊರೊನಾ ರೋಗಿ ವೈದ್ಯರನ್ನು ತಬ್ಬಿಕೊಳ್ಳುತ್ತಾರೆ, ನರ್ಸ್ ಗಳಿಗೆ ರೋಗ ಹಬ್ಬಿಸುವ ಧಮ್ಕಿ ಹಾಕುತ್ತಿದ್ದು, ದೇಶದಲ್ಲಿ ಕೊರೊನಾ ಜಿಹಾದ್ ನಡೆಯುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಇದು ಭಯೋತ್ಪಾದನೆಯ ಮುಂದುವರಿದ ಭಾಗ. ಕ್ವಾರಂಟೈನ್ ನಲ್ಲಿ ಇರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ಕಠಿಣವಾದ ಕಾನೂನು ದೇಶದಲ್ಲಿ ಜಾರಿಗೆ ಬರಬೇಕು ಎಂದು ಆಗ್ರಹಿಸಿದರು.

ಕೊರೊನಾ ವೈರಸ್ ವಿಚಾರದಲ್ಲಿ ನಾನು ರಾಜಕೀಯ ಮಾಡುತ್ತಿಲ್ಲ. ಕೊರೊನಾ ಹಬ್ಬಿಸುವ ನೀಚ ಬುದ್ಧಿಯನ್ನು ಜನತೆಯ ಮುಂದೆ ತೆರೆದಿಡುತ್ತಿದ್ದೇನೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಗೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದರು. ಆಶಾ ಕಾರ್ಯಕರ್ತೆಯ ಮನೆಗೆ ಭೇಟಿ ಕೊಟ್ಟಿದ್ದೇನೆ, ಆಕೆಯ ಸ್ಥಿತಿ ಕಂಡು ನನಗೆ ದುಃಖವಾಯಿತು ಎಂದು ಕಳವಳ ವ್ಯಕ್ತಪಡಿಸಿದರು.

Corona Is The Continuing Part Of Terrorism: MP Shobha Karandlaje

ಕೊರೊನಾ ವೈರಸ್ ನಿಂದಾಗಿ ಸದ್ಯ ಕೇರಳ ರೆಡ್ ಜೋನ್ ಏರಿಯಾ ಆಗಿದೆ, ಕೇರಳದವರು ಕೊರೊನಾ ವೈರಸ್ ಹಬ್ಬಿಸುವುದನ್ನು ನಾವು ಸಹಿಸುವುದಿಲ್ಲವೆಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಕಾಸರಗೋಡು ಇಡೀ ದೇಶದ ರೆಡ್ ಝೋನ್ ಏರಿಯಾ ಆದರೂ ಕಾಸರಗೋಡಿಗೆ ಚಿಕ್ಕಮಗಳೂರಿನಿಂದ ತರಕಾರಿ ರವಾನೆ ಮಾಡಿದ್ದೇವೆ.
ಮಾನವೀಯತೆ ವಿಚಾರದಲ್ಲಿ ನಾವು ಹಿಂದೆ ಮುಂದೆ ನೋಡುವುದಿಲ್ಲ ಎಂದರು.

ಕೇರಳಕ್ಕೆ ಅಗತ್ಯ ನೆರವು ಮತ್ತು ವೈದ್ಯಕೀಯ ಸೇವೆ ನೀಡಲು ಕರ್ನಾಟಕ ರಾಜ್ಯ ಸಿದ್ಧವಿದೆ. ಕೇರಳದ ಕಾಸರಗೋಡಿನ ಜನ ಕರ್ನಾಟಕಕ್ಕೆ ಬರಬಾರದು, ನಾವು ಯಾವುದೇ ಕಾರಣಕ್ಕೂ ಇದನ್ನು ಸಹಿಸುವುದಿಲ್ಲ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+