ಉಡುಪಿಯಲ್ಲಿ ಮತ್ತೋರ್ವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್

ಉಡುಪಿ, ಜೂನ್ 30: ಉಡುಪಿ ಜಿಲ್ಲೆಯಲ್ಲಿ ಮತ್ತೋರ್ವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಗೆ ಕೊರೊನಾ ವೈರಸ್ ಸೋಂಕು ದೃಢಗೊಂಡಿದ್ದು, ಎರಡೇ ದಿನದ ಅಂತರದಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.

ಈ ವಿದ್ಯಾರ್ಥಿನಿ ಕುಂದಾಪುರ ತಾಲೂಕಿನವಳಾಗಿದ್ದು, ಈಗಾಗಲೇ ಮೂರು ಪರೀಕ್ಷೆ ಬರೆದಿದ್ದಾಳೆ. ಈಕೆಗೆ ಮಹಾರಾಷ್ಟ್ರದಿಂದ ಬಂದವರ ಮೂಲಕ ಸೋಂಕು ಹಬ್ಬಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರವನ್ನು ಶಿಕ್ಷಣ ಇಲಾಖೆ ಸ್ಯಾನಿಟೈಸ್ ಮಾಡಿದೆ. ಕೊರೊನಾ ವೈರಸ್ ಬಂದಿರುವ ವಿದ್ಯಾರ್ಥಿನಿಗೆ ಉಳಿದ ಮೂರು ಪರೀಕ್ಷೆಗೆ ಆಗಸ್ಟ್ ತಿಂಗಳ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುತ್ತದೆ.

Coronavirus Positive For SSLC Student In Udupi

ಉಡುಪಿಯಲ್ಲಿ ಎರಡು ದಿನಗಳ ಹಿಂದೆ ಕಾಪು ತಾಲೂಕಿನ ಓರ್ವ ವಿದ್ಯಾರ್ಥಿನಿಗೂ ಕೊರೊನಾ ವೈರಸ್ ಸೋಂಕು ತಗುಲಿತ್ತು. ಇದೀಗ ಎರಡೇ ದಿನದಲ್ಲಿ ಇಬ್ಬರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿದಂತಾಗಿದೆ.

ಉತ್ತರ ಕನ್ನಡದಲ್ಲಿ 41 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 41 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದು ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸಿದೆ. ಭಟ್ಕಳದಲ್ಲಿ ಅತಿ ಹೆಚ್ಚು, ಅಂದರೆ 21 ಮಂದಿಗೆ ಸೋಂಕು ದೃಢಪಟ್ಟಿದ್ದು, ಅಂಕೋಲಾದಲ್ಲಿ ಐದು, ದಾಂಡೇಲಿ, ಹಳಿಯಾಳ, ಕುಮಟಾದಲ್ಲಿ ತಲಾ‌ ನಾಲ್ಕು, ಮುಂಡಗೋಡದಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿವೆ. ಹೆಚ್ಚಿನ ಪ್ರಕರಣಗಳಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂದವರಿಗೇ ಸೋಂಕು ತಗುಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+