ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಎಫೆಕ್ಟ್: ಉಡುಪಿಯಲ್ಲಿ ಸೆಕ್ಷನ್ 144 ಜಾರಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮಾರ್ಚ್ 18: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಕೆಲವು ವಿಶೇಷ ಕ್ರಮಗಳನ್ನು ಕಟ್ಟುನಿಟ್ಟಾಗಿ ಮಾ. 18 ರಿಂದ ಮುಂದಿನ ಆದೇಶದವರೆಗೆ ಪಾಲಿಸಬೇಕು ಎಂದು ಉಡುಪಿ ಜಿಲ್ಲಾಡಳಿತ ಮಂಗಳವಾರ ಆದೇಶಿಸಿದ್ದು, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ 144(3) ಸೆಕ್ಷನ್ ಜಾರಿಗೊಳಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ದೇವಸ್ಥಾನಗಳಲ್ಲಿ ನಡೆಯುವ ಉತ್ಸವ, ಜಾತ್ರೆಗಳಲ್ಲಿ ಕೇವಲ ಅಲ್ಲಿನ ಸಿಬ್ಬಂದಿ ಮಾತ್ರ ಭಾಗವಹಿಸಬೇಕು ಮತ್ತು ಉತ್ಸವಗಳಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ಸೂಚಿಸಲಾಗಿದೆ.

ಭಕ್ತರಿಗೆ ದೇವರ ದರ್ಶನಕ್ಕಷ್ಟೇ ಅವಕಾಶ ನೀಡಿ ಉಳಿದೆಲ್ಲ ಸೇವೆಗಳನ್ನು ರದ್ದುಪಡಿಸಲಾಗಿದೆ. ದೇವಸ್ಥಾನಗಳಿಗೆ ಬರುವ ಸಾರ್ವಜನಿಕರಿಗೆ ತಂಗಲು ಅವಕಾಶ ಇರುವುದಿಲ್ಲ. ದೇವಸ್ಥಾನ, ಮಸೀದಿ, ಚರ್ಚ್‌ ಒಳಗೊಂಡಂತೆ ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಸಾರ್ವಜನಿಕರು ಪ್ರವೇಶಿಸಬಾರದೆಂದು ಸೂಚಿಸಲಾಗಿದೆ.

Corona Effect: Section 144 Enforcement In Udupi

ಬೇಸಿಗೆ ಶಿಬಿರ, ಸಮಾರಂಭಗಳು, ವಿಚಾರ ಸಂಕಿರಣಗಳು ಮತ್ತಿತರ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ಬೀಚ್‌ಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮದುವೆ, ನಿಶ್ಚಿತಾರ್ಥ ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿ ಸೇರದಂತೆ ಸರಳವಾಗಿ ಆಯೋಜಿಸಬೇಕು ಎಂದು ತಿಳಿಸಿದ್ದಾರೆ.

ಹೆಚ್ಚು ಜನರು ಸೇರುವ ಕುಟುಂಬದ ಧಾರ್ಮಿಕ ಕಾರ್ಯಕ್ರಮಗಳನ್ನು ತಮ್ಮ ಸ್ವಂತ ಸ್ಥಳದಲ್ಲಿ ಆಚರಿಸುವುದು ಮತ್ತು ಹೊರಗಿನವರು ಸೇರುವುದು ತಡೆಯುವ ಬಗ್ಗೆ ಆದೇಶದಲ್ಲಿ ಸೂಚಿಸಲಾಗಿದೆ.

English summary
Udupi DC Jagdish has enacted Section 144(3) in Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X