ಉಡುಪಿಯಲ್ಲಿ ಗರ್ಭಿಣಿಗೆ ಕೊರೊನಾ ಶಂಕೆ

ಉಡುಪಿ, ಮಾರ್ಚ್ 17: ಕರ್ನಾಟಕದಲ್ಲಿ ದಿನೇ ದಿನೇ ಕೊರೊನಾ ವೈರಸ್ ಪ್ರಕರಣದಲ್ಲಿ ಏರಿಕೆ ಕಾಣುತ್ತಿದೆ. ಈ ಹಿಂದೆ ಉಡುಪಿಯ ಮೂವರು ವಿದ್ಯಾರ್ಥಿಗಳಲ್ಲೂ ಕೊರೊನಾ ವೈರಸ್ ಶಂಕೆ ಕಂಡುಬಂದಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಯಾವುದೇ ಸೋಂಕು ಇಲ್ಲ ಎಂದು ದೃಢಪಟ್ಟಿತ್ತು. ಇದೀಗ ಇಲ್ಲಿನ ಗರ್ಭಿಣಿಯೊಬ್ಬರಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ.

Recommended Video

      ಹೀಗೆಲ್ಲ ಮಾಡಿದ್ರೆ ಕೊರೋನ ವೈರಸ್ ಹತ್ತಿರ ಸುಳಿಯೋದಿಲ್ಲ!

      ಮಾರ್ಚ್ 13 ರಂದು ದುಬೈನಿಂದ ಈ ಮಹಿಳೆ ಬಂದಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಮ್ಮು, ನೆಗಡಿ ಮತ್ತು ಶೀತ ಇದ್ದ ಕಾರಣ ವಿಶೇಷ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗರ್ಭಿಣಿಯ ಗಂಟಲಿನ ದ್ರವವನ್ನು ಶಿವಮೊಗ್ಗ ಲ್ಯಾಬ್ ‍ಗೆ ಕಳುಹಿಸಿಕೊಟ್ಟಿರುವುದಾಗಿ ಉಡುಪಿಯ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

      ಮಂಗಳೂರಿನಲ್ಲೂ ಕೊರೊನಾ ಶಂಕೆ ಇರುವ ವ್ಯಕ್ತಿಗಳ ಸಂಖ್ಯೆ ಏರುತ್ತಿದೆ. ಸೋಮವಾರ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮಾಡುವ ಸಂದರ್ಭ 10 ಜನರಲ್ಲಿ ಕೊರೊನಾ ಶಂಕೆ ವ್ಯಕ್ತಗೊಂಡಿದೆ. ಐದು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

      Coronavirus Suspect In Pregnant In Udupi

      ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಂದು ಮಂಗಳೂರಿನಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಸಭೆ ನಡೆಯಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+