ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ ನಿಂದ ಆರಂಭವಾಗುತ್ತಾ ಸೇವೆಗಳು?

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಆಗಸ್ಟ್ 31: ರಾಜ್ಯದ ದೇವಸ್ಥಾನಗಳಲ್ಲಿ ಸೇವೆಗಳನ್ನು ಆರಂಭಿಸುವ ಕುರಿತು ಎರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಡುಪಿಯಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Recommended Video

NIAಗೆ ವರ್ಗವಾಗುತ್ತಾ ಬೆಂಗಳೂರು ಗಲಭೆ ಪ್ರಕರಣ..? | Oneindia Kannada

ಉಡುಪಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, "ಅನ್ನ ದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ. ಸೇವೆ ಆರಂಭಿಸಲು ಅನುಮತಿ ಕೋರಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದೇವೆ. ಸೆಪ್ಟೆಂಬರ್ 1ರಿಂದ ಸೇವೆ ಆರಂಭ ಮಾಡಬೇಕು ಎಂಬುದು ನಮ್ಮ ಗುರಿ. ರಾಜ್ಯ ಮುಖ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೇವೆ. ಒಳಾಂಗಣದ ಎಲ್ಲಾ ಸೇವೆ ಆರಂಭ ಮಾಡಿ ಎಂದು ಮನವಿ ಮಾಡಿದ್ದೇವೆ. ಸರ್ಕಾರದಿಂದ ಅಧಿಕೃತ ಮಾಹಿತಿ ಮತ್ತು ಅನುಮತಿ ಎರಡು ದಿನದಲ್ಲಿ ಬರಬಹುದು" ಎಂದು ತಿಳಿಸಿದರು.

ಗೋಕರ್ಣ ದಕ್ಷಿಣೆ ಸ್ವೀಕಾರ ವಿವಾದ: ರಾಮಚಂದ್ರಾಪುರ ಮಠಕ್ಕೆ ಗೆಲುವುಗೋಕರ್ಣ ದಕ್ಷಿಣೆ ಸ್ವೀಕಾರ ವಿವಾದ: ರಾಮಚಂದ್ರಾಪುರ ಮಠಕ್ಕೆ ಗೆಲುವು

ಸಾಮಾಜಿಕ ಅಂತರ ಕಾಪಾಡಿಕೊಂಡು ನಡೆಸಲಾಗುವ ಸೇವೆಗೆ ಅವಕಾಶ ಇದೆ. ಚಿನ್ನದ ರಥ ಸೇವೆ, ಬೆಳ್ಳಿರಥ ಸೇವೆ ಹೇಗೆ ಎಂಬ ಬಗ್ಗೆ ಚಿಂತನೆ ನಡೆಸುತ್ತೇವೆ.

Decision Of Starting Sevas In Temple Will Be Taken In 2 Days Said Kota Srinivasa Pujari


ಕೋವಿಡ್-19 ಮಾರ್ಗಸೂಚಿ ಮೇಲೆ ನಮ್ಮ ಸೇವೆ ಆರಂಭವಾಗುತ್ತದೆ. ನೂರಾರು, ಸಾವಿರಾರು ಜನ ಸೇರಿ ಮಾಡುವ ಸೇವೆ ಸಾಧ್ಯವಿಲ್ಲ. ಹತ್ತು-ಹದಿನೈದು ಜನರು ಮಾತ್ರ ಸೇರುವ ಧಾರ್ಮಿಕ ಸೇವೆ ನಡೆಸುವ ಚಿಂತನೆ ನಡೆಸುತ್ತೇವೆ ಎಂದರು.

ಕೋವಿಡ್ ನಿಯಮದ ಮಿತಿಯ ಒಳಗೆ ಎಲ್ಲಾ ಸೇವೆಗಳು ಇರುತ್ತವೆ ಎಂದೂ ಸಚಿವ ಕೋಟ ಶ್ರೀನಿವಾಸ ಪೂಜಾರಿ ದೃಢಪಡಿಸಿದರು.

English summary
The decision to start seva's in the temples of the state will be taken within two days, said Kota Srinivasa Pujari in Udupi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X