ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ಉಡುಪಿ, ಮಾರ್ಚ್ 26: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಗೆ ಭೇಟಿ ನೀಡಿದ್ದಾರೆ. ಸಂಸದೆ ಶೋಭಾ ಕರಂದ್ಲಾಜೆ ಇಂದು ಮಂಗಳವಾರ ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್ ಉಡುಪಿ ಆಗಮಿಸಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಉಡುಪಿಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿರುವ ನಿರ್ಮಲಾ ಅವರು ನಂತರ ಮೀನುಗಾರರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ಈ ಮೊದಲು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್, ಶ್ರೀ ಕೃಷ್ಣನ ದರ್ಶನ ಪಡೆದು, ನಂತರ ಪರ್ಯಾಯ ಪಲಿಮಾರು ಶ್ರೀಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ರಕ್ಷಣಾ ಸಚಿವರೊಂದಿಗೆ ಮಾತನಾಡಿದ ಪಲಿಮಾರು ಶ್ರೀ, ಪಾಕಿಸ್ತಾನದ ಎಫ್ 16 ಯುದ್ದ ವಿಮಾನವನ್ನು ಹೊಡೆದುರುಳಿಸಿದ ಭಾರತೀಯ ವಾಯು ಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ನನ್ನು ಉಡುಪಿಗೆ ಕಳುಹಿಸಿಕೊಡಿ ಎಂದು ಆಗ್ರಹಿಸಿದ್ದಾರೆ.

ವಿಂಗ್ ಕಮಾಂಡರ್ ಅಭಿನಂದನ್ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಕೃಷ್ಣಮಠದಲ್ಲಿ ಅಭಿನಂದನ್ ಗೆ ಗೌರವಾರ್ಪಣೆ ಮಾಡಬೇಕು ಎಂದು ರಕ್ಷಣಾ ಸಚಿವೆ ಬಳಿ ಪಲಿಮಾರುಶ್ರೀ ಬೇಡಿಕೆ ಮುಂದಿಟ್ಟರು.
ಶ್ರೀಗಳ ಆಗ್ರಹಕ್ಕೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಕಾನೂನಾತ್ಮಕ ಅಡೆ ತಡೆ ಇಲ್ಲದಿದ್ದರೆ ಅಭಿನಂದನ್ ಅವರನ್ನು ಕಳುಹಿಸಿಕೊಡುತ್ತೇವೆ. ರಕ್ಷಣಾ ಇಲಾಖೆಗೆ ಒಂದು ಪತ್ರ ಬರೆಯಿರಿ ಎಂದು ಹೇಳಿದರು.












Click it and Unblock the Notifications