ನಿರ್ಮಲಾ ಸೀತಾರಾಮನ್ ಸಹಾಯ ಕೋರಿದ ಉಡುಪಿ ಮೀನುಗಾರರು
ಉಡುಪಿ, ಫೆಬ್ರವರಿ 25: ಆಳಸಮುದ್ರ ಮೀನುಗಾರಿಕೆಗೆ ಉಡುಪಿಯ ಮಲ್ಪೆ ಬಂದರಿನಿಂದ ಹೊರಟು ಕಣ್ಮರೆಯಾಗಿರುವ 7 ಮಂದಿ ಮೀನುಗಾರರ ಬಗ್ಗೆಯಾಗಲಿ, ಅವರು ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಬಗ್ಗೆಯಾಗಲಿ ಈವರೆಗೆ ಚಿಕ್ಕ ಕುರುಹು ಕೂಡ ಲಭ್ಯವಾಗಿಲ್ಲ.
ಉಡುಪಿ ಪೊಲೀಸರ ತಂಡ, ಕೋಸ್ಟ್ ಗಾರ್ಡ್ ಹಾಗೂ ನೌಕಾ ಪಡೆ ಕಳೆದ 2 ತಿಂಗಳಿನಿಂದ ಶೋಧಕಾರ್ಯ ನಡೆಸಿದರೂ ಒಂದೇ ಒಂದು ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಕೈ ಚೆಲ್ಲಿ ಕೂತಿವೆ. ಕಣ್ಮರೆಯಾಗಿರುವ ಮೀನುಗಾರರ ನಿಗೂಢತೆ ಬೇಧಿಸಲು ಉಡುಪಿ ಮೀನುಗಾರರು ರಕ್ಷಣಾ ಸಚಿವರ ಸಹಾಯ ಕೋರಿದ್ದಾರೆ.
ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದ ಉಡುಪಿ ಮೀನುಗಾರರ ನಿಯೋಗವು ನಿನ್ನೆ ಬೆಂಗಳೂರಿನಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕಣ್ಮರೆಯಾಗಿರುವ ಮೀನುಗಾರರ ಪತ್ತೆ ಹಾಗೂ ರಕ್ಷಣೆಗೆ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಖುದ್ದಾಗಿ ತಾನೇ ಮಾರ್ಚ್ 5ರೊಳಗೆ ನೌಕಾ ಪಡೆಯ ಅಧಿಕಾರಿಗಳ ಸಹಿತ ಮಲ್ಪೆಗೆ ಆಗಮಿಸಿ ಮೀನುಗಾರರೊಂದಿಗೆ ಸಭೆ ನಡೆಸಿ ಮುಂದಿನ ಕಾರ್ಯಾಚರಣೆ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ಇದು ಕಣ್ಮರೆಯಾಗಿರುವ ಮೀನಗಾರರ ಕುಟುಂಬಸ್ಥರಲ್ಲಿ ಆಶಾ ಭಾವನೆ ಮೂಡಿಸಿದೆ.
ನಿಯೋಗದಲ್ಲಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಅಖಿಲ ಭಾರತೀಯ ಮೀನುಗಾರರ ವೇದಿಕೆಯ ಪದಾಧಿಕಾರಿಗಳಾದ ದಯಾನಂದ ಸುವರ್ಣ, ಕರುಣಾಕರ ಸಾಲ್ಯಾನ್ , ಶಶಿಧರ ತಿಂಗಳಾಯ, ಗೋಪಾಲ ಆರ್.ಕೆ., ಹರೀಶ್ ಕುಂದರ್ ಹಾಗೂ ನಾಪತ್ತೆಯಾದ ಮೀನುಗಾರರ ಕುಟುಂಬ ಸದಸ್ಯರಾದ ಗಣೇಶ್ ಕೋಟ್ಯಾನ್ , ಪ್ರಮೋದ್ ಸಾಲ್ಯಾನ್ , ಪಾಂಡು ಮೊಗೇರ ಉಪಸ್ಥಿತರಿದ್ದರು.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications