ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ!

|
Google Oneindia Kannada News

ಬೆಂಗಳೂರು, ನ. 30: ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂಬ ಸಂದೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೊಟ್ಟಿದ್ದಾರೆ. ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿರುವ ಅವರು ನಾವೆಲ್ಲರೂ ಕಾಂಗ್ರೆಸ್ ಪಕ್ಷದಲ್ಲಿರುವುದು ನಮ್ಮ ಸೌಭಾಗ್ಯ. ಪಕ್ಷ ಇದ್ದರೆ ಮಾತ್ರ ನಾವು ಅಧಿಕಾರಕ್ಕೆ ಬರಲು ಸಾಧ್ಯ. ಯಾರು ಕೂಡ ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಬೇಡಿ. ಇಲ್ಲಿ ಎಲ್ಲರೂ ಕಾರ್ಯಕರ್ತರಾಗಿ ದುಡಿಯೋಣ ಎಂದಿದ್ದಾರೆ.

ನಮ್ಮಿಂದಲೇ ಪಕ್ಷ ಎಂದು ಭಾವಿಸಿದ್ದರೆ, ಅದು ಕೇವಲ ಭ್ರಮೆ, ಅದರಿಂದ ಹೊರಗೆ ಬನ್ನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ. ಉಡುಪಿಯಲ್ಲಿ ಭಾನುವಾರ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ನನ್ನಿಂದಲೇ ಪಕ್ಷ ಎನ್ನುವ ನಾಯಕರಿಗೂ ಖಡಕ್ ಸಂದೇಶ ರವಾನಿಸಿದ್ದಾರೆ.

ಈ ಹೇಳಿಕೆ ಕೇವಲ ಕಾರ್ಯಕರ್ತರಿಗೆ ಮಾತ್ರವಲ್ಲ ಎಂಬ ಮಾತುಗಳು ಕಾಂಗ್ರೆಸ್ ವಲಯದಿಂಲೇ ಕೇಳಿ ಬಂದಿವೆ. ಮುಂದುವರೆದ ಅವರು, ಇಲ್ಲಿ ಎನ್ಎಸ್‌ಯುಐ, ಸೇವಾದಳ, ಯೂಥ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ರೈತ ಘಟಕ, ಕಾರ್ಮಿಕ ಘಟಕಗಳನ್ನು ಗಮನಿಸಿದ್ದೀರಿ. ಎಲ್ಲ ಘಟಕಗಳು ಮುಖ್ಯವೇ. ಎಲ್ಲರೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಕೆಳಗೆ ಕೆಲಸ ಮಾಡಬೇಕಿದೆ. ಎಲ್ಲರೂ ಕೂಡ ಕಡ್ಡಾಯವಾಗಿ ಪಂಚಾಯತ್ ಮಟ್ಟದಲ್ಲಿ ಸಮಿತಿ ಮಾಡಬೇಕು. ಪ್ರತಿಯೊಬ್ಬರು ಬೂತ್ ಮಟ್ಟದಲ್ಲಿ ಶ್ರಮಿಸಬೇಕು. ಕಾಂಗ್ರೆಸ್ ಪಕ್ಷವನ್ನು ಕೇಡರ್ ಬೇಸ್ ಪಕ್ಷವಾಗಿ ಮಾಡಬೇಕು ಎಂದು ಸೂಚಿಸಿದ್ದಾರೆ.

ಶಾಸಕರ ಮನೆಯಲ್ಲಿ ಪಟ್ಟಿ ಮಾಡುವುದಲ್ಲ!

ಶಾಸಕರ ಮನೆಯಲ್ಲಿ ಪಟ್ಟಿ ಮಾಡುವುದಲ್ಲ!

ನಾವು ಬೂತ್ ಮಟ್ಟದಲ್ಲಿ ಸಮಿತಿ ಮಾಡಲು ತೀರ್ಮಾನಿಸಿದ್ದು, ಅದರಲ್ಲಿ ಎಲ್ಲ ಘಟಕದವರು ಭಾಗಿಯಾಗಿರಬೇಕು. ಅದಕ್ಕಾಗಿ ಆ್ಯಪ್‌ ಸಿದ್ಧಪಡಿಸುತ್ತಿದ್ದೇವೆ. ಎಲ್ಲೋ ಶಾಸಕರ ಮನೆಯಲ್ಲಿ ಕೂತು ಪಟ್ಟಿ ಮಾಡುವುದಲ್ಲ. ಬೂತ್ ಬಳಿ ಹೋಗಿ ಅಲ್ಲೇ ಆ ಸಮಿತಿ ರಚನೆಯಾಗಬೇಕು.

ಪಕ್ಷ ಇಲ್ಲವಾದ್ರೆ ನಾವ್ಯಾರು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ನಾವು ನಮ್ಮ ಮನೆ ಸರಿ ಮಾಡಿಕೊಳ್ಳೋಣ. ಯಾರು ಕೂಡ ಪಕ್ಷಕ್ಕೆ ಮುಜುಗರ ತರುವ ಹೇಳಿಕೆ ನಾನು ಸಹಿಸಲ್ಲ. ನಿಮ್ಮ ಸಮಸ್ಯೆ ಏನೇ ಇದ್ದರೂ ನನ್ನ ಬಳಿ ಬಂದು ಮಾತನಾಡಿ, ನನ್ನಿಂದಲೇ ಕಾಂಗ್ರೆಸ್ ಪಕ್ಷ ಎಂದು ತಿಳಿದಿದ್ದರೆ ಅದು ಭ್ರಮೆ. ಅದರಿಂದ ಹೊರಗೆ ಬಂದು ಕೆಲಸ ಮಾಡಿ. ಕಾಂಗ್ರೆಸ್ ಪಕ್ಷದಲ್ಲಿರುವುದು ನಮ್ಮ ಸೌಭಾಗ್ಯ.

ಕೊರೊನಾ ಕಾಲದಲ್ಲಿ ಕಾಂಗ್ರೆಸ್ ಸೇವೆ

ಕೊರೊನಾ ಕಾಲದಲ್ಲಿ ಕಾಂಗ್ರೆಸ್ ಸೇವೆ

ಪಕ್ಷದ ಸಂಘಟನೆಗಾಗಿ ನಾನು ಇಂದು ಇಲ್ಲಿಗೆ ಬಂದಿದ್ದೇನೆ. ಕೊರೋನಾ ಸಂದರ್ಭದಲ್ಲಿ ಇಡೀ ದೇಶದಲ್ಲಿ ಎಲ್ಲ ಕಚೇರಿಗಳನ್ನು ಮುಚ್ಚಿರಿ ಎಂದು ಹೇಳಿದರು. ಆದರೆ ನಾವು ಸುಮ್ಮನೆ ಕೂರಲಿಲ್ಲ. ನಾವು ನಮ್ಮದೇ ರೀತಿಯಲ್ಲಿ ಹೋರಾಟ ಮಾಡಿದೆವು. ನಮ್ಮದೇ ಆದ ಸಮಿತಿ ರಚಿಸಿ, ಬಡವರಿಗಾಗಿ ಸಹಾಯ ಮಾಡಿ, ಹೋರಾಟ ಮಾಡಿ, ಸರ್ಕಾರಕ್ಕೆ ಮಾರ್ಗದರ್ಶನ ನೀಡಿ, ಒತ್ತಡ ತಂದು ಶ್ರಮಿಕರಿಗೆ, ಕಾರ್ಮಿಕರಿಗೆ ಹಾಗೂ ರೈತರಿಗೆ ಸಹಾಯ ಮಾಡಲು ಮುಂದಾದೆವು.

ಹೊರ ರಾಜ್ಯ, ಜಿಲ್ಲೆಗಳಿಂದ ಬಂದ ಕಾರ್ಮಿಕರ ಬೆನ್ನಿಗೆ ನಿಂತೆವು. ಅವರನ್ನು ವಲಸಿಗರು ಎಂದು ಕರೆಯಬೇಡಿ. ಅವರನ್ನು ರಾಷ್ಟ್ರ ನಿರ್ಮಾತೃ ಎಂದು ಕರೆಯಲು ಆಗ್ರಹಿಸಿದೆ. ಅವರ ಪರವಾಗಿ ಹೋರಾಡಿ, ಉಚಿತ ಸಾರಿಗೆ ಕಲ್ಪಿಸಲು ರಾಜ್ಯದಿಂದ ಹೋರಾಟ ಮಾಡಲಾಯಿತು ಎಂದು ನೆನಪಿಸಿಕೊಂಡಿದ್ದಾರೆ.

20 ಲಕ್ಷ ಕೋಟಿ ರೂ. ಎಲ್ಲಿ ಹೋಯ್ತು?

20 ಲಕ್ಷ ಕೋಟಿ ರೂ. ಎಲ್ಲಿ ಹೋಯ್ತು?

ನಂತರ ನೊಂದ ಶ್ರಮಿಕ ವರ್ಗದವರಿಗೆ ತಿಂಗಳಿಗೆ 10 ಸಾವಿರ ಕೊಡುವಂತೆ ಆಗ್ರಹಿಸಿದೆವು. ಸರ್ಕಾರ ಐದು ಸಾವಿರ ಘೋಷಿಸಿತು. ಆದರೆ ಇದುವರೆಗೂ ಶೇ.10ರಷ್ಟು ಜನರಿಗೆ ಆ ಪರಿಹಾರ ನೀಡಲು ಸಾಧ್ಯವಾಗಲಿಲ್ಲ. ಇನ್ನು ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ಪರಿಹಾರ ಪ್ರಕಟಿಸಿತು. ಯಾರಿಗಾದರೂ ಏನಾದರೂ ಸಿಕ್ಕಿತಾ? ಇಲ್ಲ. ಈ ದೇಶದ ಒಬ್ಬ ಸಾಮಾನ್ಯ ಜನನಿಗೂ ಪ್ರಯೋಜನ ಸಿಕ್ಕಿಲ್ಲ.

ನಿಮ್ಮ ಕಷ್ಟ ಕಾಲದಲ್ಲಿ ಯಾರಿದ್ದರು ಎಂಬುದನ್ನು ನಾವು ಜನರಿಗೆ ತಿಳಿಸಬೇಕಿದೆ. ನಾವು ನಮ್ಮ ಆಚಾರ ವಿಚಾರ ಬದಲಾಯಿಸಿಕೊಳ್ಳಬೇಕಿದೆ. ಹೊಸ ವ್ಯವಸ್ಥೆಗೆ ಹೊಂದಿಕೊಳ್ಳಬೇಕಿದೆ. ಎಲ್ಲರ ಬಳಿಯೂ ಮೊಬೈಲ್ ಇದೆ. ಹೀಗಾಗಿ ನಾನು ಅಧಿಕಾರ ತೆಗೆದುಕೊಳ್ಳುವಾಗ ಹೊಸ ಮಾದರಿಯಲ್ಲಿ ಕಾರ್ಯಕ್ರಮ ಮಾಡಿದೆ. ಆ ಕಾರ್ಯಕ್ರಮಕ್ಕೆ ದೊಡ್ಡಮಟ್ಟದಲ್ಲಿ ಪ್ರತಿಕ್ರಿಯೆ ಸಿಕ್ಕಿತು ಎಂದು ವಿವರಿಸಿದ್ದಾರೆ.

ಕಮಲಶಿಲೆ ದೇವಾಲಯದಲ್ಲಿ ಹರಕೆ

ಕಮಲಶಿಲೆ ದೇವಾಲಯದಲ್ಲಿ ಹರಕೆ

ನಿನ್ನೆ ಇಲ್ಲಿಗೆ ಬಂದಾಗ ಇಲ್ಲಿನ ಜನ ನಾನು ಜೈಲಲ್ಲಿ ಇದ್ದಾಗ ನನಗಾಗಿ ಕಮಲಶಿಲೆ ದೇವಾಲಯದಲ್ಲಿ ಹರಕೆ ಮಾಡಿಕೊಂಡ ವಿಚಾರ ತಿಳಿಯಿತು. ನೀವು ಈ ದೇವಾಲಯಕ್ಕೆ ಬರಲೇಬೇಕು ಎಂದು ಕೇಳಿಕೊಂಡರು. ರಾಜ್ಯದ ಮೂಲೆ ಮೂಲೆಯಲ್ಲಿ ಜನ ನನಗೆ ಆಗಿರುವ ಅನ್ಯಾಯ ಸರಿಹೋಗಬೇಕು ಅಂತಾ ಪ್ರಾರ್ಥನೆ, ಪೂಜೆ ಸಲ್ಲಿಸಿದ್ದಾರೆ. ನಿಮ್ಮೆಲ್ಲರ ಪೂಜಾಫಲದಿಂದ ನಾನಿಂದು ಪಕ್ಷದ ಅಧ್ಯಕ್ಷನಾಗಿ ನಿಮ್ಮಮುಂದೆ ಬಂದು ನಿಂತಿದ್ದೇನೆ.

ನಿಮ್ಮ ಈ ಪ್ರೀತಿಗೆ ಧನ್ಯವಾದಗಳು. ನನಗೆ ಅನ್ಯಾಯ ಆಗಿದೆ ಎಂದು ನಮ್ಮ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಅಹ್ಮದ್ ಪಟೇಲರು, ಅಂಬಿಕಾ ಸೋನಿ ಅವರು ತಿಹಾರ್ ಜೈಲಿಗೆ ಬಂದು ನಮಗೆ ಧೈರ್ಯ ತುಂಬಿದ್ದರು. ಅವರು ಕೊಟ್ಟ ಶಕ್ತಿ ಡಿ.ಕೆ ಶಿವಕುಮಾರ್ ಗೆ ಮಾತ್ರವಲ್ಲ. ಇಡೀ ದೇಶದ ಕಾರ್ಯಕರ್ತರಿಗೆ ಕೊಟ್ಟ ಶಕ್ತಿ ಅದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

English summary
KPCC President D.K. Shivakumar has given the message that the party is bigger than the person. It is our good fortune that we are all in the Congress party. We can only come to power if there is a party. Don't do anything to offend the party. Everyone here is an activist says DK Shivakumar in Udupi. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X