ಉಡುಪಿ: ಕಣ್ಣಿನ ಒಳಗೆ ಇತ್ತು 15 ಸೆ.ಮೀಟರ್ ಉದ್ದದ ಜೀವಂತ ಹುಳು

ಉಡುಪಿ, ಅಕ್ಟೋಬರ್ 02: ವ್ಯಕ್ತಿಯೊಬ್ಬರ ಕಣ್ಣಿನಲ್ಲಿತ್ತು 15 ಸೆಂಟಿ ಮೀಟರ್ ಉದ್ದದ ಜೀವಂತ ಹುಳು...! ಬೆಚ್ಚಿ ಬಿದ್ದಿರಾ? ಇಂತಹದೊಂದು ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ.

60 ವರ್ಷದ ಹಿರಿಯ ವ್ಯಕ್ತಿಯೊಬ್ಬರು ಹಲವು ದಿನಗಳಿಂದ ಬಲಗಣ್ಣಿನ ನೋವಿನಿಂದ ಬಳಲುತ್ತಿದ್ದರು. ಈ ಪರಿಣಾಮ ಕುಂದಾಪುರದ ನ್ಯೂ ಮೆಡಿಕಲ್ ಸೆಂಟರಿನ ನೇತ್ರತಜ್ಞರಾದ ಡಾ.ಶ್ರೀಕಾಂತ್ ಶೆಟ್ಟಿಯವರಿಗೆ ತೋರಿಸಿದ್ದಾರೆ.

ವೈದ್ಯರು ಕಣ್ಣಿನ ತಪಾಸಣೆ ಮಾಡಿದಾಗ ಒಂದೊಮ್ಮೆ ವೈದ್ಯರೇ ಬೆಚ್ಚಿ ಬಿದ್ದಿದ್ದಾರೆ. ಆ ಹಿರಿಯ ವ್ಯಕ್ತಿಯ ಬಲಗಣ್ಣಿನ ಒಳಗೆ ಜೀವಂತ ಹರಿದಾಡುತ್ತಿರುವ ಹುಳು ಪತ್ತೆಯಾಗಿದೆ. ಕಣ್ಣಿನ ಒಳಗಿರುವ ಹುಳವನ್ನು ಔಷಧಗಳ ಮೂಲಕ ಸಾಯಿಸಿ ತೆಗೆದರೆ ಕಣ್ಣಿನ ಒಳಗೆ ಊತ ಬಂದು ದೃಷ್ಟಿಗೆ ತೊಂದರೆ ಆಗುವ ಸಾಧ್ಯತೆ ಇದ್ದ ಕಾರಣ, ಆ ಹುಳವನ್ನು ಒಂದು ಕಡೆ ಬರುವಂತೆ ಮಾಡಿ ನಂತರ ಶಸ್ತ್ರ ಚಿಕಿತ್ಸೆಯ ಮೂಲಕ ಜೀವಂತ ಹುಳವನ್ನು ತೆಗೆದಿದ್ದಾರೆ. ಈ ಹುಳು 15 ಸೆ ಮೀ ಉದ್ದವಿದೆ.

Doctors remove 15 cm worm from the eye of an old man in Udupi

ಈ ಹುಳವು 'ವುಚೆರಿಯಾ ಬ್ಯಾನ್ಕ್ರಾಫ್ಟಿ' ಎನ್ನುವ ಜಾತಿಯದಾಗಿದ್ದು ಇದು ಸೊಳ್ಳೆಗಳ ಮೂಲಕ ಹರಡುತ್ತದೆ. ಸೊಳ್ಳೆಗಳು ಕಚ್ಚಿದಾಗ ಇದರ ಲಾರ್ವಾ ರಕ್ತದಲ್ಲಿ ಸೇರಿ ಅಲ್ಲೇ ಬೆಳೆದು ಮೊಟ್ಟೆಯನ್ನಿಡುತ್ತವೆ. ಅಪರೂಪಕ್ಕೆ ಈ ಮೊಟ್ಟೆಗಳು ಕಣ್ಣಿನಲ್ಲಿ ಸೇರಿ ಅಲ್ಲೇ ಬೆಳೆದು ಹುಳುವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಗಳಿವೆ. ಹುಳ ತೆಗೆದ ನಂತರ ರೋಗಿಯು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+