Udupi News: ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ವಿದ್ಯಾಕುಮಾರಿ ನೇಮಕ

ಉಡುಪಿ, ಜುಲೈ 13: ಉಡುಪಿ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಅನುಭವವಿದ್ದ ಡಾ.ವಿದ್ಯಾ ಕುಮಾರಿ ಅವರನ್ನು ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿಕಟಪೂರ್ವ ಜಿಲ್ಲಾಧಿಕಾರಿಯಾಗಿದ್ದ ಕೂರ್ಮರಾವ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದ್ದು, ಮುಂದಿನ ಹುದ್ದೆಗೆ ನಿಯುಕ್ತಿಗೊಳಿಸಿಲ್ಲ. ಡಾ.ವಿದ್ಯಾಕುಮಾರಿ ಅವರು ಸದ್ಯ ತುಮಕೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

Dr. Vidya Kumari Has Been Appointed As The New Deputy Commissioner Of Udupi

ಡಾ.ವಿದ್ಯಾಕುಮಾರಿ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರು. 2014ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ವಿದ್ಯಾಕುಮಾರಿ ಅವರು ಆಗಿದ್ದಾರೆ. ಇನ್ನು ಈ ಹಿಂದೆ ಕೂರ್ಮರಾವ್ ಅವರು 2021ರ ಅಗಸ್ಟ್ 29ರಂದು ಉಡುಪಿ ಜಿಲ್ಲಾಧಿಕಾರಿ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು.

ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರು ಲಕ್ಷ್ಮೀ ಹೆಬ್ಬಾಳ್ಕರ್ ಅವರಾಗಿದ್ದು, ಇದೀಗ ಮಹಿಳಾ ಅಧಿಕಾರಿಯನ್ನೇ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಕ ಮಾಡಿದ್ದು, ಉಡುಪಿಯಲ್ಲಿ ಆಡಳಿತ ವ್ಯವಸ್ಥೆ ಮಹಿಳಾ ಬಲ ಬಂದಂತಾಗಿದೆ.

Dr. Vidya Kumari Has Been Appointed As The New Deputy Commissioner Of Udupi

ಇನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಷ್ ಆಯುಕ್ತರ ಹುದ್ದೆಯನ್ನು ನಿರ್ದೇಶಕರ ಹುದ್ದೆ ಸ್ಥಾನಮಾನ ಮತ್ತು ಜವಾಬ್ದಾರಿಗಳಲ್ಲಿ ಸಮಾನವೆಂದು ಘೋಷಿಸಲಾಗಿದೆ. ಐಎಎಸ್ (ವೇತನ) ನಿಯಮಗಳು, 2016ರ ನಿಯಮ 12ರ ಅಡಿಯಲ್ಲಿ ಮುನ್ಸಿಪಲ್ ಆಡಳಿತವು ಐಎಎಸ್ ಹಿರಿಯ ಶ್ರೇಣಿಯಲ್ಲಿಹೇಳಿದ ನಿಯಮಗಳ ಷೆಡ್ಯೂಲ್-II-B ಯಲ್ಲಿ ಸೇರಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+