ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ.ದಾಮೋದರ ಐತಾಳ ನಿಧನ

ಉಡುಪಿ, ಡಿಸೆಂಬರ್ 9: ನಾಡಿನ‌ ವಿವಿಧ ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ, ಹಿರಿಯ ಪತ್ರಕರ್ತರೂ ಆದ ಕೆ.ದಾಮೋದರ ಐತಾಳ ನಿಧನರಾಗಿದ್ದಾರೆ.

ಹೊಸ ದಿಗಂತ ಪತ್ರಿಕೆಯಲ್ಲಿ ಹಿಂದೆ ಕೆಲಸ ಮಾಡಿದ್ದ ಕೆ.ದಾಮೋದರ ಐತಾಳರು, ಉಡುಪಿ ಬಳಕೆದಾರರ ವೇದಿಕೆಯ ಸಂಚಾಲಕರಾಗಿದ್ದರು. ತುಳು ಶಿವಳ್ಳಿ ಮಾಧ್ವ ಮಹಾಂಮಡಲದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ, ಪ್ರತಿಷ್ಠಿತ ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆಗೆ ಶ್ರಮಿಸಿದ್ದ, ಹಿರಿಯ ಸಾಮಾಜಿಕ ಧುರೀಣ, ಕೆ.ದಾಮೋದರ ಐತಾಳ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಐತಾಳರು ಮಂಗಳೂರು ಡಿಡಿಪಿಐ ಕಚೇರಿಯಲ್ಲಿ ವಿಷಯ ಪರಿವೀಕ್ಷಣಾ ಅಧಿಕಾರಿಯಾಗಿದ್ದರು. ಉಡುಪಿ ಶಿಕ್ಷಕರ ಸಹಕಾರಿ ಬ್ಯಾಂಕ್ ಸ್ಥಾಪನೆಗೆ ಶ್ರಮಿಸಿದ್ದರು ಮತ್ತು ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

Udupi: Educationist Damodar Aital Passes Away

ದಾಮೋದರ ಐತಾಳ್ ಅವರು ಕನ್ನಡ ಪಂಡಿತರಾಗಿ ಅನೇಕ ವರ್ಷಗಳ ಕಾಲ ನಾಡಿನ ವಿವಿಧ ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಪ್ರಾಧ್ಯಾಪಕ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದರು. ಪತ್ರಿಕಾ ವರದಿಗಾರನಾಗಿ, ಅಂಕಣಕಾರರಾಗಿ, ಉಡುಪಿ ಪತ್ರಕರ್ತರ ಸಂಘ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

ದಾಮೋದರ್ ಐತಾಳ್ ಅವರು ಉಡುಪಿ ಕೃಷ್ಣ ಮಠದ ಚಿನ್ನ ಸಂತರ್ಪಣೆ ಯೋಜನೆಯ ಸ್ಪೂರ್ತಿದಾಯಕರಾಗಿದ್ದರು. ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಉಡುಪಿಯ ಬೀಡಿನಗುಡ್ಡೆ ಸ್ಮಶಾನದಲ್ಲಿ ಐತಾಳರ ಅಂತ್ಯ ಸಂಸ್ಕಾರ ನಡೆದಿದೆ.

Recommended Video

      ಭಾರತದ ಅತ್ಯಂತ ಕಿರಿಯ ವಿಕೆಟ್ ಕೀಪರ್ ಇಂದು ನಿವೃತ್ತಿ | Parthiv Patel | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+