ಉಡುಪಿ: ಚುನಾವಣಾ ಬಹಿಷ್ಕಾರ ಕ್ಕೆ ಮುಂದಾದ ಬಡಾ ಗ್ರಾಮಸ್ಥರು

ಉಡುಪಿ, ಏಪ್ರಿಲ್ 02: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನೆರವೇರಿಸಿದ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಚುನಾವಣೆಯ ದಿನಾಂಕ ಹತ್ತಿರ ಆಗುತ್ತಿದ್ದಂತೆ ಚುನಾವಣಾ ಬಹಿಷ್ಕಾರದ ಬ್ಯಾನರ್ ಗಳು ರಾರಾಜಿಸತೊಡಗಿವೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಉಡುಪಿ ಜಿಲ್ಕೆಯ ಉಚ್ಚಿಲ ಸಮೀಪದ ಬಡಾ ಗ್ರಾಮದ ಕಡಲ ಕಿನಾರೆಯ ಬಳಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಲಾಗಿದೆ. ಈ ಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಇದುವರೆಗೆ ಈಡೇರಿಸಿಲ್ಲ ಎಂದು ಆರೋಪಿಸಿ ಸ್ಥಳೀಯ ನಾಗರಿಕರು ಈ ಬಹಿಷ್ಕಾರದ ಬ್ಯಾನರ್ ಹಾಕಿದ್ದಾರೆ.

2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಬಡಾ ಗ್ರಾಮಪಂಚಾಯತ್ ವ್ಯಾಪ್ತಿಗೆ ಒಳಪಡುವ 6 ಮತ್ತು 7 ನೇ ವಾರ್ಡಿನ ಬಗ್ಗತೋಟದ ಬಳಿ ಕಡಲ ಸಮೀಪದಲ್ಲಿ ಮೀನುಗಾರರಿಗೆ ಮೂಲಭೂತ ಸೌಕರ್ಯಗಳು ಒದಗಿಸಿಲ್ಲ ಎಂದು ಆರೋಪಿಸಲಾಗಿದ್ದು ಇಲ್ಲಿಯ ಮೀನುಗಾರರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.

Election boycott banner in Bada village Udupi

ಕಾಪು ನಗರ ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಈ ಉಚ್ಚಿಲ ಬಡಾಗ್ರಾಮ ಸೇರಿದ್ದು ಗ್ರಾಮದ ಒಳಗೆ ಸಮುದ್ರದ ನೀರು ಹರಿದು ಬರುತ್ತಿರುವ ಕಾರಣ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮೀನುಗಾರರಿಗೆ ಮನೆ ಯೋಜನೆಗಳಾಗ ಮತ್ಸ್ಯಾಶ್ರಯ ಸಾಹಾಯಧನ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಮತದಾನ ಮಾಡದಿರಲು ಇಲ್ಲಿಯ ಜನರು ತೀರ್ಮಾನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+