ಉಡುಪಿ : ಪ್ರಮೋದ್ ಮಧ್ವರಾಜ್ ಪ್ರಚಾರ ವಾಹನ ವಶಕ್ಕೆ
ಉಡುಪಿ, ಮಾರ್ಚ್ 29 : ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರ ಚುನಾವಣಾ ಪ್ರಚಾರ ವಾಹನವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅನುಮತಿ ಪಡೆಯದೇ ಅವರು ಪ್ರಚಾರ ಕಾರ್ಯವನ್ನು ಕೈಗೊಂಡಿದ್ದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಹಲವು ದಿನಗಳ ಹಿಂದೆ ಸಚಿವ ಪ್ರಮೋದ್ ಮಧ್ವರಾಜ್ ಅವರ ಪ್ರಚಾರದ ವಾಹನ ಕುತೂಹಲಕ್ಕೆ ಕಾರಣವಾಗಿತ್ತು. ಸಚಿವರ ಅಭಿಮಾನಿಗಳು ತಯಾರಿಸಿದ ಪ್ರಚಾರ ವಾಹನದಲ್ಲಿ ಕಾಂಗ್ರೆಸ್ ಚಿನ್ಹೆ ಹಾಗೂ ಕಾಂಗ್ರೆಸ್ ನಾಯಕರ ಭಾವಚಿತ್ರಗಳು ಇರಲಿಲ್ಲ.
ಈ ಪ್ರಚಾರ ವಾಹನವನ್ನು ನೋಡಿದ ಮೇಲೆ ಜನರು ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿಸಿದ್ದರು. 2 ದಿನಗಳ ಹಿಂದೆಯಷ್ಟೇ ವಾಹನಕ್ಕೆ ಕಾಂಗ್ರೆಸ್ ಚಿನ್ಹೆ ಅಳವಡಿಕೆ ಮಾಡಲಾಗಿತ್ತು.

ಆದರೆ, ಪ್ರಚಾರ ವಾಹನದ ಸಂಚಾರಕ್ಕೆ ಅನುಮತಿಯನ್ನು ಪಡೆದಿರಲಿಲ್ಲ. ಉಡುಪಿ ಪ್ರವಾಸಿ ಮಂದಿರದ ಆವರಣದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ವಾಹನವನ್ನು ವಶಕ್ಕೆ ಪಡೆದುಕೊಂಡರು.
ಐಎಎಸ್ ಅಧಿಕಾರಿ ಪೂವಿಕಾ ನೇತೃತ್ವದ ಅಧಿಕಾರಿಗಳ ತಂಡ ವಾಹನವನ್ನು ಪರಿಶೀಲನೆ ನಡೆಸಿತ್ತು. ವಾಹನದ ಅನುಮತಿ ಪತ್ರವನ್ನು ಕೇಳಿದ ಅಧಿಕಾರಿಗಳು, ಪತ್ರವಿಲ್ಲದ ಕಾರಣಕ್ಕೆ ವಾಹನವನ್ನು ವಶಕ್ಕೆ ಪಡೆದುಕೊಂಡರು.
ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಬುಧವಾರ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, 'ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ' ಎಂದು ಅವರು ಸ್ಪಷ್ಟಪಡಿಸಿದ್ದಾರೆ.












Click it and Unblock the Notifications