ಉಡುಪಿ ಜಿಲ್ಲೆಗೆ ಪ್ರಮೋದ್ ಮುತಾಲಿಕ್‌ಗೆ ಪ್ರವೇಶ ನಿರ್ಬಂಧ; ಜಿಲ್ಲಾಧಿಕಾರಿ ಆದೇಶ
ಉಡುಪಿ, ಏಪ್ರಿಲ್ 14: ಹಿಜಾಬ್ ವಿಚಾರದಲ್ಲಿ ನಿಗಿ ನಿಗಿ ಕೆಂಡವಾಗಿದ್ದ ಉಡುಪಿ ಜಿಲ್ಲೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶವನ್ನು ಉಡುಪಿ ಜಿಲ್ಲಾಡಳಿತ ನಿರ್ಬಂಧಿಸಿದೆ.
ಶುಕ್ರವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಬೀರೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾಗಿದ್ದ ಪ್ರಮೋದ್ ಮುತಾಲಿಕ್‌ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಜಿಲ್ಲೆಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.
ಹಿಂದೂ ಜಾಗರಣ ವೇದಿಕೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯ ಅತಿಥಿಯಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯನ್ನಾಗಿ ಆಹ್ವಾನಿಸಲಾಗಿತ್ತು.

ಗಂಗೊಳ್ಳಿ ಕಳೆದ ಹಲವು ಸಮಯಗಳಿಂದ ಸೂಕ್ಷ್ಮ ಪರಿಸ್ಥಿತಿಯಲ್ಲಿದ್ದು ಈ ಸಂದರ್ಭದಲ್ಲಿ ಪ್ರಮೋದ್ ಮುತಾಲಿಕ್ ಭಾಷಣ ಮಾಡಿದರೆ ಕಾನೂನು ಸುವ್ಯವಸ್ಥೆ ಹದಗೆಡುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ಪ್ರಮೋದ್ ಮುತಾಲಿಕ್‌ಗೆ ಜಿಲ್ಲೆಗೆ ಆಗಮನಕ್ಕೆ ಅವಕಾಶ ನೀಡಬಾರದೆಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಜಿಲ್ಲಾಧಿಕಾರಿ ಕೂರ್ಮರಾವ್‌ಗೆ ಮನವಿ ನೀಡಿದ್ದರು. ಪೊಲೀಸ್ ಅಧೀಕ್ಷಕರ ಮನವಿ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಮುತಾಲಿಕ್‌ಗೆ ಪ್ರವೇಶ ನಿರ್ಬಂಧದ ಆದೇಶ ಹೊರಡಿಸಿದ್ದಾರೆ.
ದಿನಾಂಕ 15/04/2022ರ ಶುಕ್ರವಾರ ಹಿಂದೂ ಜಾಗರಣಾ ವೇದಿಕೆ ಗಂಗೊಳ್ಳಿ ಇದರ ಆಯೋಜಕತ್ವದಲ್ಲಿ ಗಂಗೊಳ್ಳಿ ಗ್ರಾಮದ ಬೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಅಂಗವಾಗಿ ಸಂಜೆ 05.00 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಯಕ್ರಮಲ್ಲಿ ಪಾಲ್ಗೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹರ್ದತೆಗೆ ಧಕ್ಕೆ ಆಗಿ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ಸಾದ್ಯತೆಗಳು ಹೆಚ್ಚಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮವು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು, ಈ ಹಿಂದೆ 2014ರಿಂದ ಕೋಮು ಪ್ರೇರಿತ ಘಟನೆ ನಡೆದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿರುತ್ತವೆ. ಆದ್ದರಿಂದ ದಿನಾಂಕ 15/04/2022 ರಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗಮನದ ಪ್ರವೇಶವನ್ನು ಉಡುಪಿ ಜಿಲ್ಲಾದ್ಯಂತ ನಿರ್ಬಂಧಿಸಲು ಆದೇಶಿಸುವಂತೆ ಉಡುಪಿ ಜಿಲ್ಲೆ ಪೊಲೀಸ್ ಅಧೀಕ್ಷಕರು ಮನವಿ ಸಲ್ಲಿಸಿದ್ದರು.
ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿದೆ.
ಈ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಪತ್ರದಲ್ಲಿನ ಪೊಲೀಸ್ ಅಧೀಕ್ಷಕರ ಮಾಹಿತಿಯನ್ನು ಆಧರಿಸಿ ಮುಂಜಾಗ್ರತ ಕ್ರಮವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 133, 143 ಮತ್ತು 144ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ಉಡುಪಿ ಜಿಲ್ಲಾ ಪ್ರವೇಶ ನಿಷೇಧಿಸುವುದಾಗಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications