ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಗೆ ಇಎಸ್‌ಐ ಆಸ್ಪತ್ರೆ ಮಂಜೂರು, ಶೀಘ್ರದಲ್ಲೇ ಕಾಮಗಾರಿ ಆರಂಭ

|
Google Oneindia Kannada News

ಉಡುಪಿ, ಆಗಸ್ಟ್ 24; ಕೇಂದ್ರ ಸರ್ಕಾರ ಕರಾವಳಿ ಭಾಗದ ಜನರಿಗೆ ಬಂಪರ್ ಕೊಡುಗೆ ನೀಡಿದೆ. ಉಡುಪಿಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಜಮೀನು ಗುರುತಿಸುವ ಕೆಲಸ ಪೂರ್ಣಗೊಂಡ ಬಳಿಕ ಆಸ್ಪತ್ರೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.

ಬುಧವಾರ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯವಿರುವ ಜಮೀನನ್ನು ಆದಷ್ಟೂ ಶೀಘ್ರದಲ್ಲಿ ಗುರುತಿಸಿ, ಆಸ್ಪತ್ರೆ ಕಾಮಗಾರಿ ಆರಂಭಕ್ಕೆ ಎಲ್ಲಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

 ಪ್ರಮೋದ್ ಮಧ್ವರಾಜ್ ಬಿಜೆಪಿಗೆ: ಶೋಭಾ ಕರಂದ್ಲಾಜೆ ಎಲ್ಲಿಗೆ? ಉಡುಪಿ ರಾಜಕೀಯ ಕುತೂಹಲ! ಪ್ರಮೋದ್ ಮಧ್ವರಾಜ್ ಬಿಜೆಪಿಗೆ: ಶೋಭಾ ಕರಂದ್ಲಾಜೆ ಎಲ್ಲಿಗೆ? ಉಡುಪಿ ರಾಜಕೀಯ ಕುತೂಹಲ!

ಉಡುಪಿ ಜಿಲ್ಲೆಗೆ ಈಗಾಗಲೇ ಮಂಜೂರಾಗಿರುವ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯವಿರುವ ಕ್ರಮಗಳನ್ನು ಶೀಘ್ರದಲ್ಲಿ ಕೈಗೊಳ್ಳುವಂತೆ ಸೂಚಿಸಿದ ಅವರು, ಇಎಸ್ಐ ಔಷಧಾಲಯ ಸ್ಥಾಪನೆಗೆ ಸೂಕ್ತ ಸ್ಥಳವನ್ನು ಗುರುತಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟರು.

ಉಡುಪಿ; ಬಿ. ಆರ್. ಶೆಟ್ಟಿ ಆಸ್ಪತ್ರೆ ಸರ್ಕಾರದ ಸುರ್ಪದಿಗೆಉಡುಪಿ; ಬಿ. ಆರ್. ಶೆಟ್ಟಿ ಆಸ್ಪತ್ರೆ ಸರ್ಕಾರದ ಸುರ್ಪದಿಗೆ

ESI Hospital Work To Start Soon At Udupi

ಆದ್ಯತೆ ಮೇಲೆ ಕಾರ್ಯ ಕೈಗೊಳ್ಳಿ; ಗ್ರಾಮೀಣ ಪ್ರದೇಶಗಳಲ್ಲಿ ಇರುವ ಕಾಲು ಸಂಕಗಳನ್ನು ಗುರುತಿಸಿ, ಆ ಭಾಗದಲ್ಲಿ ಸೇತುವೆಗಳನ್ನು ನಿರ್ಮಿಸಲು ಆದ್ಯತೆಯ ಮೇರೆಗೆ ಕಾರ್ಯೋನ್ಮುಖರಾಗುವಂತೆಯೂ ಮಜೋನ್ ಜೈನ್ ಅಧಿಕಾರಿಗಳಿಗೆ ತಿಳಿಸಿದರು.

ಆರ್ಥಿಕ ಪತನ ನಿಜ, ಆದರೆ ನಾನೆಲ್ಲಿಗೂ ಓಡಿ ಹೋಗಿಲ್ಲ, ಹೋಗೋದು ಇಲ್ಲ: ಉದ್ಯಮಿ ಬಿ.ಆರ್ ಶೆಟ್ಟಿಆರ್ಥಿಕ ಪತನ ನಿಜ, ಆದರೆ ನಾನೆಲ್ಲಿಗೂ ಓಡಿ ಹೋಗಿಲ್ಲ, ಹೋಗೋದು ಇಲ್ಲ: ಉದ್ಯಮಿ ಬಿ.ಆರ್ ಶೆಟ್ಟಿ

ಉಡುಪಿ ಜಿಲ್ಲೆಯಲ್ಲಿ ನಗರೋತ್ಥಾನ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಕ್ತಾಯಗೊಳ್ಳುವ ಹಾಗೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.

ಜಿಲ್ಲಾ ಪಂಚಾಯಿತಿ ಸಿಇಓಗಳಿಗೆ ಜಲಜೀವನ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಲು, ಕಾಮಗಾರಿಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದರು.

ESI Hospital Work To Start Soon At Udupi

ಸಭೆಯಲ್ಲಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., "ಜಿಲ್ಲೆಯಲ್ಲಿ ಅತಿವೃಷ್ಠಿಯಿಂದ ಹಾನಿಯಾಗಿರುವ 190 ಶಾಲೆ ಹಾಗೂ 70 ಅಂಗನವಾಡಿಗಳ ದುರಸ್ಥಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಹಾನಿಯಾದ ರಸ್ತೆಗಳ ಸಣ್ಣ-ಪುಟ್ಟ ದುರಸ್ಥಿ ಕಾಮಗಾರಿಗಳನ್ನು ನಿರ್ವಹಿಸಲಾಗಿದೆ" ಎಂದರು.

ಮುಂಗಾರು ಮಳೆಯಿಂದ ಹಾನಿಯಾದ ಬಗ್ಗೆ ವಿವರಿಸಿದ ಜಿಲ್ಲಾಧಿಕಾರಿಗಳು, "ಪ್ರವಾಹದಂತಹ ಸಂದಿಗ್ದತೆಯನ್ನು ಎದುರಿಸಲು ಜಿಲ್ಲಾಡಳಿತ ಮಾನ್ಸೂನ್ ಪ್ರಾರಂಭದಲ್ಲಿಯೇ ಕಾರ್ಯತಂತ್ರವನ್ನು ರೂಪಿಸಿದ್ದು, ಅದರಂತೆ ಪ್ರಾಕೃತಿಕ ವಿಕೋಪಗಳ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿ ಮುಖ್ಯಮಂತ್ರಿಯವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಸಭೆಯಲ್ಲಿ ನೀಡಿರುವ ನಿರ್ದೇಶನಗಳಂತೆ ವಿಪತ್ತು ನಿರ್ವಹಣೆ ಕಾರ್ಯದಲ್ಲಿ ನಡೆಯುತ್ತಿದೆ" ಎಂದರು.

"ವಿವಿಧ ಇಲಾಖೆಗಳಿಗೆ ಅಗತ್ಯವಿರುವ ತುರ್ತು ಬೋಟ್, ಲೈಫ್ ಜಾಕೆಟ್ ಮತ್ತಿತ್ತರ ಉಪಕರಣಗಳನ್ನು ನಿಯಮಾನುಸಾರ ಸುಮಾರು ರೂ. 20.00 ಲಕ್ಷ ವೆಚ್ಚದಲ್ಲಿ ಖರೀದಿಸಲಾಗಿದ್ದು, ಅದರಂತೆ ಸಂಬಂಧಿತ ಇಲಾಖೆಗಳಿಗೆ ಹಸ್ತಾಂತರಿಸಲಾಗುವುದು" ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಜುಲೈ ತಿಂಗಳಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ಅಪಾರವಾದ ಹಾನಿಯಾಗಿತ್ತು. ಪ್ರಸ್ತುತ ಆಗಸ್ಟ್ ತಿಂಗಳಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಜನ ಜೀವನ ಸಹಜ ಸ್ಥತಿಗೆ ಬಂದಿದೆ.

ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗುವ ಮನೆಗಳ ವಿವಿರಗಳನ್ನು ರಾಜೀವ್ ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗುತ್ತಿದೆ. ಈ ಹಿಂದೆ 2019, 2020, 2021ರ ಸಾಲಿನಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಲಾಗುತ್ತಿದೆ.

ಮೃತಪಟ್ಟಿದ್ದ ಬಾಲಕಿ; ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ಶಾಲಾ ಬಾಲಕಿ ಕಾಲುಸಂಕ ದಾಟುವ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು, ಮೃತಪಟ್ಟ ಘಟನೆ ನಡೆದಿತ್ತು.

ಈಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾಲುಸಂಕ ಅಗತ್ಯವಿರುವ ನದಿ ಪ್ರದೇಶಗಳಲ್ಲಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಸುಮಾರು 404 ಸ್ಧಳಗಳಲ್ಲಿ ಕಾಲು ಸಂಕ ನಿರ್ಮಾಣ ಮಾಡಲು ಸರ್ಕಾರದಿಂದ ಅನುಮೋದನೆಯೂ ದೊರೆತಿದೆ. ಅದರಲ್ಲಿ 235 ಕಾಮಗಾರಿಗಳು ಟೆಂಡರ್ ಹಂತ ಮುಕ್ತಾಯಗೊಂಡಿದೆ ಎಂದು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.

ಉಳಿದ ಕಾಲುಸಂಕ ಕಾಮಗಾರಿಗಳಿಗೆ ಸಂಬಂಧಿಸಿದ ಆಡಳಿತಾತ್ಮಕ ಕಾರ್ಯಗಳನ್ನು 15 ದಿನಗಳೊಳಗೆ ಮುಕ್ತಾಯಗೊಳಿಸಿ, ಅತೀ ಶೀಘ್ರದಲ್ಲಿ ಅಗತ್ಯ ಕಾಲು ಸಂಕಗಳ ನಿರ್ಮಾಣ ಕಾರ್ಯವನ್ನು ಆದ್ಯತೆಯ ಮೇರೆಗೆ, ವಿಶೇಷ ಮುತುವರ್ಜಿ ಮೂಲಕ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.

English summary
Udupi district in-charge secretary Manoj Jain directed officials to find land to construct ESI hospital and ensure to start construction work soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X