ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಮಾಸ್ಕ್ ಧರಿಸದೆ ಓಡಾಡುವ ಜನರಿಗೆ ದಂಡ ಪ್ರಯೋಗ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಏಪ್ರಿಲ್ 20: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಮುಖ್ಯವಾಗಿ ಉಡುಪಿಯ ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ನೂರಾರು ಸಂಖ್ಯೆಯಲ್ಲಿ ಕೊರೊನಾ ಸೋಂಕು ತಗುಲಿದ್ದು, ಅದು ಸಾಕಷ್ಟು ಸಂಖ್ಯೆಯಲ್ಲಿ ಹರಡಿದೆ.

ಈ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ನೈಟ್ ಕರ್ಫ್ಯೂ ಕೂಡ ಸದ್ಯ ಜಾರಿಯಲ್ಲಿದೆ. ಇಷ್ಟಾದರೂ ಕೂಡ ಇಲ್ಲಿಯ ಜನರು ಇನ್ನೂ ಕೂಡ ಪಾಠ ಕಲಿತಂತೆ ಕಾಣುತ್ತಿಲ್ಲ.

ಮಾಸ್ಕ್ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಜನರು ಎಲ್ಲೆಂದರಲ್ಲಿ ತಿರುಗಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಕ್ರಮ ಕೈಗೊಂಡಿರುವ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ, ಎಲ್ಲ ಠಾಣೆಗಳ ವ್ಯಾಪ್ತಿಯಲ್ಲಿ, ಮಾರುಕಟ್ಟೆ ಪ್ರದೇಶ, ಅಂಗಡಿಗಳು ಮತ್ತು ಹೆಚ್ಚಿನ ಜನರು ಸೇರುವ ಪ್ರದೇಶಗಳಲ್ಲಿ ಪೊಲೀಸರು ಮಾಸ್ಕ್ ಹಾಕದ ಜನರಿಗೆ ದಂಡ ವಿಧಿಸುವ ಕೆಲಸ ಮಾಡುತ್ತಿದ್ದಾರೆ.

Fined To People Who Walk Without Wearing A Mask In Public Place

Recommended Video

ಬೆಂಗಳೂರಿಗರಿಗೆ ಗುಡ್‌ ನ್ಯೂಸ್‌, ಬಿಎಂಟಿಸಿ ಸಂಚಾರ ಆರಂಭ | Oneindia Kannada

ಸೋಮವಾರ ಮಾರುಕಟ್ಟೆ, ಬಸ್ ನಿಲ್ದಾಣ ಮತ್ತು ಹೆದ್ದಾರಿಯಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಜನರಿಗೆ ಪೊಲೀಸರು ದಂಡ ವಿಧಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಒಂದೇ ಕಡೆ ಸೇರಿರುವ ಜನರನ್ನು ಚದುರಿಸುವ ಕೆಲಸ ಮಾಡಿದರು.

English summary
In Udupi district Coronavirus Cases increasing day by day. The police Fined to people who do not mask in the market area, shops and areas where most people gather.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X