ಉಡುಪಿಯಲ್ಲಿ ಮನೆಗೆ ಆಕಸ್ಮಿಕ ಬೆಂಕಿ: ಅಪಾರ ನಷ್ಟ

ಉಡುಪಿ, ಏಪ್ರಿಲ್ 14: ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉಡುಪಿ ಜಿಲ್ಲೆಯ ಶಿರ್ವ ಠಾಣಾ ವ್ಯಾಪ್ತಿಯ ಬೆಳಪುವಿನಲ್ಲಿ ಸಂಭವಿಸಿದೆ.

ಬೆಳಪು ದ್ವಾರಕಲಗುತ್ತು ಸುಭಾಷ್ ಶೆಟ್ಟಿ ಎಂಬುವವರ ಮನೆ ಬೆಂಕಿಗಾಹುತಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಹೊರ ಬರಲಾರಂಭಿಸಿದೆ.

Fire Accident In Udupi: Immense Loss

ತಕ್ಷಣ ಪಕ್ಕದ ಮೆನೆಯವರು ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳ ಚುರುಕು ಕಾರ್ಯಚರಣೆಯಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

Fire Accident In Udupi: Immense Loss

ಇತ್ತೀಚೆಗಷ್ಟೇ ಸುಭಾಷ್ ಶೆಟ್ಟಿ ಅವರು ಮನೆ ನವೀಕರಣಗೊಳಿಸಿದ್ದು, ಮನೆ ಮಂದಿ ಕಾಪುವಿನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಅಗ್ನಿ ಅವಘಡದಿಂದ ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಬೆಳಪು ಗ್ರಾಮ ಪಂಚಾಯತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಹಾಗು ಶಿರ್ವ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+