ಕಾರ್ಕಳದ ಬಾಕ್ಸ್ ತಯಾರಿಕಾ ಘಟಕದಲ್ಲಿ ಬೆಂಕಿ; ಲಕ್ಷಾಂತರ ರೂ.ನಷ್ಟ
ಉಡುಪಿ, ಜುಲೈ 10: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ಅಗ್ನಿ ಆಕಸ್ಮಿಕದಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಇಲ್ಲಿನ ಪ್ರಭಾಕರ ಶೆಣೈ ಎಂಬುವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
Recommended Video
Asia cup postponed till june 2021 | Oneindia Kannada
ಪ್ರಭಾಕರ ಶೆಣೈ ಎಂಬುವರ ಮನೆಯ ಮೇಲೆ ಬಾಕ್ಸ್ ತಯಾರಿಕಾ ಘಟಕವಿದ್ದು, ಈ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಈ ಅವಘಡ ಸಂಭವಿಸಿದೆ. ಚಿನ್ನಾಭರಣ ಪ್ಯಾಕ್ ಮಾಡುವ ಬಾಕ್ಸ್ ತಯಾರಿಸುವ ಘಟಕ ಇದಾಗಿದೆ.

ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಈಗಾಗಲೇ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ಬೆಂಕಿಗಾಹುತಿಯಾಗಿವೆ. ಕಾರ್ಯಾಚರಣೆ ಮುಂದುವರೆದಿದೆ.












Click it and Unblock the Notifications