ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮೇ 20: ಉಡುಪಿಯ ಮಲ್ಪೆಯಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಬೋಟ್ ಒಂದು ಮುಳುಗಡೆ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೋಟ್ ನಲ್ಲಿದ್ದ ಎಲ್ಲ 6 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ಮೀನುಗಾರಿಕೆಗೆ ತೆರಳಿ ವಾಪಾಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮಲ್ಪೆ ಬಂದರು ಸಮೀಪ ಬರುವಾಗ ಈ ಬೋಟ್ ಅಕಸ್ಮಾತ್ ಆಗಿ ಬಂಡೆಗೆ ಬಡಿದಿತ್ತು. ಶ್ರೀ ಸ್ವರ್ಣರಾಜ್ ಹೆಸರಿನ ಆಳ ಸಮುದ್ರ ಬೋಟ್ ಇದಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಮುಂಬೈ ಟು ಉಡುಪಿ: ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ಮುಂಬೈ ಟು ಉಡುಪಿ: ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್

ಮೇ 14 ರಂದು ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಮೇ 19 ರಂದು ವಾಪಾಸ್ ಆಗುವಾಗ ಆಚಾತುರ್ಯ ನಡೆಯಿತು. ಬೋಟ್ ನ‌ ಸ್ಟೇರಿಂಗ್ ಕಟ್ ಆಗಿ ನಿಯಂತ್ರಣ ತಪ್ಪಿ ಬಂಡೆಗೆ ಡಿಕ್ಕಿ ಹೊಡೆದಿದೆ.

Fishing Boat Drowned In Malpe Near Udupi

ಪಕ್ಕದಲ್ಲಿದ್ದ ಇನ್ನೊಂದು ದೋಣಿಯವರಿಂದ ಬೋಟ್ ನಲ್ಲಿದ್ದ 6 ಜನರ ರಕ್ಷಣೆ ಮಾಡಿದ್ದರಿಂದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂದಾಜು 80 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ.

English summary
Swarnaraj Fishing Boat Drowned In Sea and 6 fishermen rescued at Malpe, Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X