ಉಡುಪಿ; ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ
ಉಡುಪಿ, ಅಕ್ಟೋಬರ್ 21: ಉಡುಪಿ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕೆಲವು ದಿನಗಳಿಂದ ಉತ್ತರ ಕರ್ನಾಟಕ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಅಕ್ಟೋಬರ್ 22, 23 ಹಾಗೂ 24ರಂದು ಕೂಡ ಕರಾವಳಿ ಭಾಗದಲ್ಲಿ ಮಳೆಯಾಗುವುದಾಗಿ ಮುನ್ಸೂಚನೆ ನೀಡಲಾಗಿದೆ. ಗುಡುಗು ಮಿಂಚು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಮೂರು ದಿನಗಳಲ್ಲಿ 65 ಮಿ.ಮೀಗಳಿಗಿಂತ ಅಧಿಕ ಮಳೆಯಾಗುವ ಸಾಧ್ಯತೆಯನ್ನು ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಪ್ರದೇಶಗಳ ಮೇಲೂ ಆಗಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 12.6 ಮಿ.ಮೀ ಮಳೆ ದಾಖಲಾಗಿದೆ.

ಯೆಲ್ಲೋ ಅಲರ್ಟ್ ಘೋಷಣೆ: ಗಾಳಿಯ ತೀವ್ರತೆ ಮುಂದುವರಿದ ಪರಿಣಾಮ ರಾಜ್ಯದ ವಿವಿಧೆಡೆ ಅಕ್ಟೋಬರ್ 23ರವರೆಗೆ ಸಾಧಾರಣದಿಂದ ಭಾರಿ ಮಳೆ ಬೀಳುವ ನಿರೀಕ್ಷೆ ಇದ್ದು, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ, ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.












Click it and Unblock the Notifications