ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇಶಕ್ಕಾಗಿ ಬಿಜೆಪಿಯಿಂದ ಒಬ್ಬನಾದ್ರು ಸತ್ತಿದ್ದಾನಾ?: ಮಾಜಿ ಸಿಎಂ ಪ್ರಶ್ನೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಫೆಬ್ರವರಿ 22: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸ್ವಾತಂತ್ರ್ಯ ಹೋರಾಟದಲ್ಲಿ ಎಂದಾದರೂ ಭಾಗವಹಿಸಿತ್ತಾ? ಹೆಡಗೇವಾರ್, ಗುರೂಜಿ ಗೋಲ್ವಾಲ್ಕರ್ ಸ್ವಾತಂತ್ರ್ಯ ಹೋರಾಟಗಾರರಾ? ದೇಶಕ್ಕಾಗಿ ಬಿಜೆಪಿಯಿಂದ ಒಬ್ಬನಾದರೂ ಸತ್ತಿದ್ದಾನಾ? ಹೀಗೆ ಪ್ರಶ್ನಿಸಿದವರು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ.

ಉಡುಪಿಯಲ್ಲಿ ಜನಧ್ವನಿ ಪಾದಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಮಹಾತ್ಮ ಗಾಂಧಿ ಕೊಂದವರಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಾ ಎಂದು ಕಟುವಾಗಿ ಪ್ರಶ್ನಿಸಿದರು.

ಮಾತು ಮುಂದುವರೆಸಿ, ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ಬಂದ ಮೇಲೆ ಹುಟ್ಟಿದ ಗಿರಾಕಿ, ನಾನು ಸ್ವಾತಂತ್ರ್ಯಕ್ಕಿಂತ 12 ದಿನ ಮೊದಲು ಹುಟ್ಟಿದ್ದೇನೆ. ಮೋದಿ ಎದೆ ಎಷ್ಟಿಂಚು ಮುಖ್ಯ ಅಲ್ಲ, ಮೋದಿಗೆ ಜನಪರ ಹೃದಯ ಇಲ್ಲದಿದ್ದರೆ ಅದರಿಂದ ಏನು ಪ್ರಯೋಜನ ಎಂದು ವಾಗ್ದಾಳಿ ನಡೆಸಿದರು.

ಸಮಾನವಾಗಿ ಕಾಣುವುದೇ ಜಾತ್ಯಾತೀತತೆ

ಸಮಾನವಾಗಿ ಕಾಣುವುದೇ ಜಾತ್ಯಾತೀತತೆ

ಜಾತಿ, ಧರ್ಮಗಳನ್ನು ಮೀರಿ ಪ್ರತಿಯೊಬ್ಬನನ್ನು ಸಮಾನವಾಗಿ ಕಾಣುವುದೇ ಜಾತ್ಯಾತೀತತೆ. ಇದು ಕುವೆಂಪುರವರ ವಿಶ್ವಮಾನವ ತತ್ವಕ್ಕೆ ಅನುಗುಣವಾಗಿರುವಂತಹುದು. ಧರ್ಮದ ಹೆಸರಿನಲ್ಲಿ ಸಮಾಜ ಒಡೆದು, ದ್ವೇಷಭಾವನೆ ಬಿತ್ತುವ ಬಿಜೆಪಿಯವರು ಅಲ್ಪಮಾನವರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಒಂದು ಕಾಲದಲ್ಲಿ ಸರ್ವಧರ್ಮ ಸಮನ್ವಯತೆಯ ತವರಾಗಿದ್ದ ದಕ್ಷಿಣ ಕನ್ನಡವನ್ನು ಬಿಜೆಪಿ ನಾಯಕರು ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಇಲ್ಲಿನ ಜನ ಪರಸ್ಪರ ಅಪನಂಬಿಕೆಯಿಂದ ಜೀವನ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಅದಕ್ಕೆ ಆರ್.ಎಸ್.ಎಸ್ ಮತ್ತು ಬಿಜೆಪಿಯೇ ಕಾರಣವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಬಿಜೆಪಿ ನಾಯಕರು ಇತಿಹಾಸ ನೆನಪು ಮಾಡಿಕೊಳ್ಳಲಿ

ಬಿಜೆಪಿ ನಾಯಕರು ಇತಿಹಾಸ ನೆನಪು ಮಾಡಿಕೊಳ್ಳಲಿ

ದೇಶಪ್ರೇಮದ ಪಾಠ ಮಾಡುವ ಬಿಜೆಪಿ ನಾಯಕರು ತಮ್ಮ ಇತಿಹಾಸವನ್ನೊಮ್ಮೆ ನೆನಪು ಮಾಡಿಕೊಳ್ಳಲಿ. ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಕಾಂಗ್ರೆಸ್ ನಾಯಕರು ತ್ಯಾಗ, ಬಲಿದಾನಗೈದಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣಾರ್ಪಣೆ ಮಾಡಿದ ಒಬ್ಬನೇ ಒಬ್ಬ ಆರ್.ಎಸ್‌.ಎಸ್ ನಾಯಕನ ಹೆಸರನ್ನು ಬಿಜೆಪಿಯವರು ಹೇಳಲಿ ನೋಡೋಣ ಎಂದು ಸವಾಲೆಸೆದರು. ಹೆಡ್ಗೇವಾರ್, ಗೊಲ್ವಾಲ್ಕರ್ ಇವರೆಲ್ಲ ಸ್ವಾತಂತ್ರ್ಯ ಚಳುವಳಿಯಿಂದ ದೂರ ಉಳಿದದ್ದು ಯಾಕೆ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮ ಗಾಂಧಿಯವರನ್ನು ಕೊಂದವರು ಇವತ್ತು ದೇಶಪ್ರೇಮದ ಪಾಠ ಮಾಡುತ್ತಾರೆ. ಇಂಥವರ ದೇಶಪ್ರೇಮದ ಪಾಠ ಯಾರಿಗೆ ಬೇಕಿದೆ ಸ್ವಾಮಿ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ನನ್ನ ಹೆಸರಿನಲ್ಲೇ ರಾಮನಿದ್ದಾನೆ

ನನ್ನ ಹೆಸರಿನಲ್ಲೇ ರಾಮನಿದ್ದಾನೆ

ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ. ಮಹಾತ್ಮ ಗಾಂಧಿಯವರಂತೆ ನಾನು ರಾಮ ಭಕ್ತನೆ. ದೇಶಕ್ಕೆ ಬೇಕಿರುವುದು ಗಾಂಧಿಯವರ ಆದರ್ಶ ಪುರುಷ ರಾಮ. ಗಾಂಧಿಯವರನ್ನು ಕೊಂದ ಸಂಘಪರಿವಾರದವರು ರಾಮಭಕ್ತರಾಗಲು ಸಾಧ್ಯವೇ ಇಲ್ಲ. ರಾಮಭಕ್ತರೆಂದರೆ ಕಾಯುವವರೋ? ಕೊಲ್ಲುವವರೋ? ಎಂದು ಮರುಪ್ರಶ್ನಿಸಿದರು. ಅಯೋಧ್ಯೆ ರಾಮ ಮಂದಿರಕ್ಕೆ ದುಡ್ಡು ಕೊಡಲ್ಲ, ನಮ್ಮೂರಿನ ರಾಮಮಂದಿರಕ್ಕೆ ದುಡ್ಡು ಕೊಡುತ್ತೇನೆ. ಅಯೋಧ್ಯೆಯಲ್ಲಿ ಕಟ್ಟೋದು ದಶರಥನ ಮಗನದ್ದೇ ದೇಗುಲ, ನಮ್ಮೂರಲ್ಲಿ ಕಟ್ಟುವ ರಾಮಮಂದಿರ ಕೂಡಾ ದಶರಥನ ಮಗನಿಗೇ ಎಂದು ಉಡುಪಿಯ ಪಡುಬಿದ್ರೆಯಲ್ಲಿ ಸಿದ್ದರಾಮಯ್ಯ ಹೇಳಿದರು.

ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ

ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ

ಬಿಜೆಪಿ ಸರ್ಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು 3 ಕೆ.ಜಿ ಗೆ ಇಳಿಸಿ ಬಡಜನರ ಊಟ ಕಸಿದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಂಪೂರ್ಣ ವಿಶ್ವಾಸ ನನಗಿದೆ. ಆಗ ಪ್ರತೀ ವ್ಯಕ್ತಿಗೆ ಉಚಿತವಾಗಿ ತಲಾ 10 ಕೆ.ಜಿ ಅಕ್ಕಿ ನೀಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ಕೇಂದ್ರ ಸರ್ಕಾರದ ಕೆಟ್ಟ ಆರ್ಥಿಕ ನೀತಿಗಳಿಂದಾಗಿ ಇಂದು ದೇಶದ ಉತ್ಪಾದನಾ ವಲಯ ನಿಷ್ಕ್ರಿಯಗೊಂಡಿದೆ. ದಕ್ಷಿಣ ಕನ್ನಡ ಭಾಗದಲ್ಲಿ ಬೀಡಿ ಉದ್ಯಮವನ್ನು ನಂಬಿಕೊಂಡಿದ್ದ 50,000 ಜನರ ಬದುಕು ಬೀದಿಪಾಲಾಗಿದೆ. ಇದರ ಪುನಶ್ಚೇತನಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಯಾವ ಕ್ರಮ ಕೈಗೊಂಡಿದೆ? ಎಂದು ಕಿಡಿಕಾರಿದರು.

English summary
RSS ever participated in the freedom struggle? Is anyone dead from BJP for the country? Former CM Siddaramaiah questioned in Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X