Breaking; ಕಾಂಗ್ರೆಸ್‌ ತೊರೆದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ, ಮೇ 07; ಉಡುಪಿ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷ ತೊರೆದಿದ್ದಾರೆ. ಫೇಸ್‌ಬುಕ್‌ನಲ್ಲಿ ರಾಜೀನಾಮೆ ಪತ್ರವನ್ನು ಅವರು ಹಾಕಿದ್ದಾರೆ.

ಶನಿವಾರ ಮಧ್ಯಾಹ್ನ ಫೇಸ್‌ ಬುಕ್ ಪುಟದಲ್ಲಿ My Resignation to Congress Party ಎಂಬ ಪೋಸ್ಟ್ ಹಾಕಿದ್ದು, ರಾಜೀನಾಮೆ ಪತ್ರದವನ್ನು ಲಗತ್ತಿಸಿದ್ದಾರೆ. ಪತ್ರವನ್ನು ಟ್ವೀಟ್ ಸಹ ಮಾಡಿದ್ದಾರೆ.

2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದಿದ್ದ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು.

v

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಪತ್ರವನ್ನು ರವಾನಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೆಪಿಸಿಸಿ ತಮ್ಮನ್ನು ಉಪಾಧ್ಯಕ್ಷರಾಗಿ ನೇಮಿಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.

ಪಕ್ಷ ಸಂಘಟನೆಗೆ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಉಡುಪಿ ಕಾಂಗ್ರೆಸ್ ಘಟಕದ ಪರಿಸ್ಥಿತಿ ಸರಿ ಇಲ್ಲ. ಈ ಕುರಿತು ನಿಮ್ಮ ಜೊತೆ ಸಹ ಚರ್ಚೆ ನಡೆಸಿದ್ದೆ ಎಂದು ಪ್ರಮೋದ್ ಮಧ್ವರಾಜ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಮೋದ್ ಮಧ್ವರಾಜ್ ಉಡುಪಿ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. 2018ರ ಚುನಾವಣೆಯಲ್ಲಿ 72,902 ಮತಗಳನ್ನು ಪಡೆದು ಬಿಜೆಪಿಯ ರಘುಪತಿ ಭಟ್ ವಿರುದ್ಧ ಸೋಲು ಕಂಡಿದ್ದರು.

2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಅವರು ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರೆದಿದ್ದರು.

2019ರ ಲೋಕಸಭೆ ಚುನಾವಣೆಗೆ ಜೆಡಿಎಸ್‌-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಬಿಜೆಪಿಯ ಶೋಭಾ ಕರಂದ್ಲಾಜೆ ಎದುರು ಪರಭಾವಗೊಂಡಿದ್ದರು.

ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಎಂದು ಪಕ್ಷ ಸೇರಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+