ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಕಾಂಗ್ರೆಸ್‌ ತೊರೆದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

|
Google Oneindia Kannada News

ಉಡುಪಿ, ಮೇ 07; ಉಡುಪಿ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷ ತೊರೆದಿದ್ದಾರೆ. ಫೇಸ್‌ಬುಕ್‌ನಲ್ಲಿ ರಾಜೀನಾಮೆ ಪತ್ರವನ್ನು ಅವರು ಹಾಕಿದ್ದಾರೆ.

ಶನಿವಾರ ಮಧ್ಯಾಹ್ನ ಫೇಸ್‌ ಬುಕ್ ಪುಟದಲ್ಲಿ My Resignation to Congress Party ಎಂಬ ಪೋಸ್ಟ್ ಹಾಕಿದ್ದು, ರಾಜೀನಾಮೆ ಪತ್ರದವನ್ನು ಲಗತ್ತಿಸಿದ್ದಾರೆ. ಪತ್ರವನ್ನು ಟ್ವೀಟ್ ಸಹ ಮಾಡಿದ್ದಾರೆ.

2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದಿದ್ದ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು.

ಪ್ರಮೋದ್ ಮಧ್ವರಾಜ್ ಗೆ ಕೆಪಿಸಿಸಿ ಎಐಸಿಸಿಯಿಂದ ಕರೆಪ್ರಮೋದ್ ಮಧ್ವರಾಜ್ ಗೆ ಕೆಪಿಸಿಸಿ ಎಐಸಿಸಿಯಿಂದ ಕರೆ

v

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಪತ್ರವನ್ನು ರವಾನಿಸಿದ್ದಾರೆ. ಕೆಲವು ದಿನಗಳ ಹಿಂದೆ ಕೆಪಿಸಿಸಿ ತಮ್ಮನ್ನು ಉಪಾಧ್ಯಕ್ಷರಾಗಿ ನೇಮಿಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.

ಜೆಡಿಎಸ್‌ಗೆ ರಾಜೀನಾಮೆ ನೀಡಿದ ಕಾಂಗ್ರೆಸ್‌ನ ಪ್ರಮೋದ್ ಮಧ್ವರಾಜ್!ಜೆಡಿಎಸ್‌ಗೆ ರಾಜೀನಾಮೆ ನೀಡಿದ ಕಾಂಗ್ರೆಸ್‌ನ ಪ್ರಮೋದ್ ಮಧ್ವರಾಜ್!

ಪಕ್ಷ ಸಂಘಟನೆಗೆ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಉಡುಪಿ ಕಾಂಗ್ರೆಸ್ ಘಟಕದ ಪರಿಸ್ಥಿತಿ ಸರಿ ಇಲ್ಲ. ಈ ಕುರಿತು ನಿಮ್ಮ ಜೊತೆ ಸಹ ಚರ್ಚೆ ನಡೆಸಿದ್ದೆ ಎಂದು ಪ್ರಮೋದ್ ಮಧ್ವರಾಜ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೆಲೆಯೇ ಇಲ್ಲದ ಜೆಡಿಎಸ್ ನಿಂದ ಸ್ಪರ್ಧಿಸಿ ಈ ಪಾಟಿ ಸೋಲುವುದು ಬೇಕಿತ್ತಾ, ಪ್ರಮೋದ್ ಮಧ್ವರಾಜ್? ನೆಲೆಯೇ ಇಲ್ಲದ ಜೆಡಿಎಸ್ ನಿಂದ ಸ್ಪರ್ಧಿಸಿ ಈ ಪಾಟಿ ಸೋಲುವುದು ಬೇಕಿತ್ತಾ, ಪ್ರಮೋದ್ ಮಧ್ವರಾಜ್?

ಪ್ರಮೋದ್ ಮಧ್ವರಾಜ್ ಉಡುಪಿ ಕ್ಷೇತ್ರದಿಂದ 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. 2018ರ ಚುನಾವಣೆಯಲ್ಲಿ 72,902 ಮತಗಳನ್ನು ಪಡೆದು ಬಿಜೆಪಿಯ ರಘುಪತಿ ಭಟ್ ವಿರುದ್ಧ ಸೋಲು ಕಂಡಿದ್ದರು.

2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಅವರು ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರೆದಿದ್ದರು.

2019ರ ಲೋಕಸಭೆ ಚುನಾವಣೆಗೆ ಜೆಡಿಎಸ್‌-ಕಾಂಗ್ರೆಸ್ ಒಮ್ಮತದ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಬಿಜೆಪಿಯ ಶೋಭಾ ಕರಂದ್ಲಾಜೆ ಎದುರು ಪರಭಾವಗೊಂಡಿದ್ದರು.

ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಎಂದು ಪಕ್ಷ ಸೇರಲಿದ್ದಾರೆ? ಎಂಬುದು ಇನ್ನೂ ಖಚಿತವಾಗಿಲ್ಲ.

English summary
Udupi former MLA and Congress leader Pramod Madhwaraj quit Congress party. My resignation to Congress party he posted resignation letter on face book page.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X