ಉಡುಪಿಯಲ್ಲಿ ಇರಾನಿ ಗ್ಯಾಂಗ್ ನ ನಾಲ್ವರು ವಂಚಕರ ಬಂಧನ
ಉಡುಪಿ, ಅಕ್ಟೋಬರ್ 22: ಪೊಲೀಸರು ಎಂದು ಹೇಳಿ ಜನರಿಗೆ ನಂಬಿಸಿ ವಂಚನೆ ಮಾಡುತ್ತಿದ್ದುದಲ್ಲದೇ, ವೃದ್ಧರು ಮತ್ತು ಮಹಿಳೆಯರನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದ ನಾಲ್ವರು ಇರಾನಿ ಗ್ಯಾಂಗ್ ನ ಕಳ್ಳರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಜಾಕೀರ್ ಹುಸೇನ್ (26), ಕಂಬರ್ ರಹೀಂ ಮಿರ್ಜಾ (32 ), ಅಕ್ಷಯ್ ಸಂಜಯ್ ಗೋಸ್ವಾಮಿ (22), ಶಾಹರುಖ್ ಬಂದೆನವಾಜ್ ಶೇಖ್ (24) ಬಂಧಿತ ಆರೋಪಿಗಳಾಗಿದ್ದಾರೆ.
ಈ ನಾಲ್ವರು ಆರೋಪಿಗಳು ದೆಹಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಲ್ಲಿ ವಯಸ್ಸಾದ ಒಂಟಿ ಮಹಿಳೆಯರು, ಗಂಡಸರನ್ನು ಟಾರ್ಗೆಟ್ ಮಾಡಿ ದೋಚುತ್ತಿದ್ದರು.

ನಾವು ಪೊಲೀಸರು, ಮುಂದೆ ಗಲಾಟೆ ಆಗಿದೆ, ಚಿನ್ನಾಭರಣ ಬ್ಯಾಗಿನಲ್ಲಿ ಹಾಕಿಕೊಂಡು ಹೋಗಿ ಎಂದು ಹೇಳಿ ಅವರಲ್ಲಿದ್ದ ಚಿನ್ನಾಭರಣಗಳನ್ನು ತೆಗೆದು ಬ್ಯಾಗಿನಲ್ಲಿ ಹಾಕಿಕೊಡುವುದಾಗಿ ನಂಬಿಸಿ, ಅವರಿಗೆ ತಿಳಿಯದಂತೆ ಚಿನ್ನಾಭರಣವನ್ನು ಮೋಸದಿಂದ ಲಪಟಾಯಿಸುತ್ತಿದ್ದರು ಎನ್ನಲಾಗಿದೆ.
ಈ ಎಲ್ಲ ಆರೋಪಿಗಳ ವಿರುದ್ಧ ಉಡುಪಿ, ಕುಂದಾಪುರ, ವಿಜಯಪುರ, ಚಿಕ್ಕಮಗಳೂರು, ಬಂಟ್ವಾಳ, ಮಂಗಳೂರು ಸಹಿತ ಹಲವೆಡೆ ವಂಚನೆ ಪ್ರಕರಣಗಳು ದಾಖಲಾಗಿವೆ.












Click it and Unblock the Notifications