ಉಡುಪಿಯಲ್ಲಿ ಮರಳುಗಾರಿಕೆ ದೋಣಿಗಳಿಗೆ ಜಿಪಿಎಸ್ ಕಡ್ಡಾಯ

Posted By: ಕಿರಣ್ ಸಿರ್ಸೀಕರ್
Subscribe to Oneindia Kannada

ಉಡುಪಿ, ಸೆಪ್ಟೆಂಬರ್ 12: ಉಡುಪಿ ಜಿಲ್ಲೆಯ ಸಿಆರ್ ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಮುದ್ರದಲ್ಲಿ ದೋಣಿಗಳು ಸಂಚರಿಸಲು ಅಡ್ಡಿಯಾಗಿರುವ ಮರುಳು ದಿಬ್ಬಗಳನ್ನು ಮಾತ್ರ ತೆಗೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಕೃಷ್ಣಾಷ್ಟಮಿ, ವಿಟ್ಲಪಿಂಡಿಗೆ ಹುಲಿ ವೇಷದ ತಯಾರಿ

ರಜತಾದ್ರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಗೆ ಭೇಟಿ ನೀಡಿ ಮಾತನಾಡಿ, ಎನ್ ಐಟಿಕೆ ತಜ್ಞರ ತಂಡದಿಂದ ಸಮುದ್ರದಲ್ಲಿ ದೋಣಿಗಳ ಸಂಚಾರಕ್ಕೆ ಅಡ್ಡಿಯಾಗಿರುವ ಮರಳು ದಿಬ್ಬಗಳನ್ನು ಗುರುತಿಸಲಾಗಿದ್ದು, ಆ ಪ್ರದೇಶದಲ್ಲಿ ಮಾತ್ರ ಮರಳು ತೆಗೆಯಲು ಅನುಮತಿ ನೀಡಲಾಗಿದೆ ಎಂದರು.

GPS mandatory for sand mining boats in Udupi: Minister Pramod Madhwaraj

ಅಲ್ಲಿ ತೆಗೆಯುವ ಮರಳನ್ನು ಜಿಲ್ಲೆಯ ಉಪಯೋಗಕ್ಕೆ ಮಾತ್ರ ಬಳಸುವಂತೆ ತಿಳಿಸಿದ ಅವರು, ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೊರಗೆ ಮರಳನ್ನು ಸಾಗಿಸದಂತೆ ಸೂಚಿಸಿದರು.

ಮರಳುಗಾರಿಕೆಗೆ ತೆರಳುವ ದೋಣಿಗಳಿಗೆ ಜಿಪಿಎಸ್ ಸಾಧನಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಹಾಗೂ ತಮಗೆ ಅವಕಾಶ ನೀಡಿದ ಪ್ರದೇಶ ಬಿಟ್ಟು ಬೇರೆಡೆಯಲ್ಲಿ ಮರಳು ತೆಗೆಯದಂತೆ ಸಚಿವರು ಸೂಚಿಸಿದರು. ಜಿಪಿಎಸ್ ಅಳವಡಿಕೆಯಿಂದ ಮರಳುಗಾರಿಕೆಯ ಪ್ರತಿ ಮಾಹಿತಿ ಲಭ್ಯವಾಗಲಿದ್ದು, ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲ ಎಂದರು.

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗೆ 'ಉತ್ತಮ ವಿದ್ಯಾರ್ಥಿ ಪ್ರಶಸ್ತಿ'

ಮರಳು ತೆಗೆಯಲು ಪರ್ಮಿಟ್ ಪಡೆದಿರುವ ಪ್ರತಿಯೊಬ್ಬರಿಗೂ ಜಿಪಿಎಸ್ ಅಳವಡಿಕೆ ಕುರಿತು ಮಾಹಿತಿ ನೀಡಿದ ಪ್ರಮೋದ್ ಮಧ್ವರಾಜ್, ರಾಷ್ಟ್ರೀಯ ಹಸಿರು ಪೀಠ ಹಾಕಿರುವ ಷರತ್ತುಗಳ ಅನ್ವಯ ಮರಳುಗಾರಿಕೆ ನಡೆಸುವಂತೆ ಎಲ್ಲ ಪರ್ಮಿಟ್ ದಾರರಿಗೆ ತಿಳಿಸಿದರು.

ನಿಯಮಗಳನ್ನು ಉಲ್ಲಂಘಿಸಿದಲ್ಲಿ ಹಸಿರು ಪೀಠದಿಂದ ಜಿಲ್ಲೆಯಲ್ಲಿ ಮರುಳುಗಾರಿಕಗೆ ತಡೆಯಾಜ್ಞೆ ಬರಲಿದೆ ಎಂದು ಹೇಳಿದ ಅವರು ಜಿಲ್ಲೆಯ ಜನತೆಯ ಹಿತಕ್ಕಾಗಿ ಮತ್ತು ಪರಿಸರ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದೇನೆ. ಸುಮ್ಮನೆ ಆರೋಪಗಳ್ನು ಮಾಡಬೇಡಿ ಎಂದರು.

ಜಿಲ್ಲೆಯಲ್ಲಿ ಮರಳುಗಾರಿಕೆ ವಾಹನಗಳಿಗೆ ಮತ್ತು ದೋಣಿಗಳಿಗೆ ಜಿಪಿಎಸ್ ಅಳವಡಿಸಲು ಟೆಲಿಮ್ಯಾಟಿಕ್ಸ್ ಫಾರ್ ಯು ಸರ್ವಿಸ್ ಕಂಪೆನಿ ಟೆಂಡರ್ ಪಡೆದಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಯಶಸ್ವಿಯಾಗಿ ಜಿಪಿಎಸ್ ಅಳವಡಿಸಿ ಮರಳುಗಾರಿಕೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
GPS mandatory for sand mining boats in Udupi and sand of district should not transport out of Udupi, strictly warned by minister Pramod Madhwaraj.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ