ಮೇಗರವಳ್ಳಿ-ಆಗುಂಬೆ ರಸ್ತೆ ಅಭಿವೃದ್ಧಿಗೆ ಕೇಂದ್ರದ ಅನುದಾನ

ಉಡುಪಿ, ಜೂನ್ 1: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಒಟ್ಟು 279.03 ಕೋಟಿ ರೂಪಾಯಿ ಮಂಜೂರು ಮಾಡಿದೆ.

ಕೇಂದ್ರ ಭೂ ಸಾರಿಗೆ ಇಲಾಖೆ ರಸ್ತೆ ಅಭಿವೃದ್ಧಿಗಾಗಿ ಹಣ ಮಂಜೂರು ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

2022ರ ಜನವರಿಯಲ್ಲಿ ಶೋಭಾ ಕರಂದ್ಲಾಜೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದರು.

agumbe

ಸಂಸದೆ ಶೋಭಾ ಕರಂದ್ಲಾಜೆ ಕೋರಿಕೆಯನ್ನು ಪರಿಣಿಸಿರುವ ಸಚಿವ ನಿತಿನ್ ಗಡ್ಕಡಿ ರಸ್ತೆಗಳ ಅಭಿವೃದ್ಧಿಗೆ ಒಟ್ಟು 279.03 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಮೂರು ರಸ್ತೆಗಳ ಅಭಿವೃದ್ಧಿಗೆ ಅನುದಾನ; ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮೇಗರವಳ್ಳಿಯಿಂದ ಆಗುಂಬೆಯವರೆಗೆ ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ವಿಸ್ತರಣೆ ಮಾಡಲು 96.20 ಕೋಟಿ ಅನುದಾನ ಮೀಸಲಿಡಲಾಗಿದೆ. ಈ ರಸ್ತೆ ಶಿವಮೊಗ್ಗ-ಆಗುಂಬೆ ಮೂಲಕ ಉಡುಪಿಯನ್ನು ಸಂಪರ್ಕಿಸುತ್ತದೆ.

ರಾಷ್ಟ್ರೀಯ ಹೆದ್ದಾರಿ 169ರ ಮಾಳ ಗೇಟ್‌ನಿಂದ ಕಾರ್ಕಳದವರೆಗೆ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು 177.94 ಕೋಟಿ ರೂಪಾಯಿ ಮೀಸಲಿಡಲಾಗಿದೆ.

shobha

ರಾಷ್ಟ್ರೀಯ ಹೆದ್ದಾರಿ 766-ಸಿ, ಬೈಂದೂರು - ರಾಣೆಬೆನ್ನೂರು ವಿಭಾಗದಲ್ಲಿ ರಸ್ತೆ ಸುರಕ್ಷತಾ ಕಾಮಗಾರಿಗಾಗಿ 4.89 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ಪ್ರಮುಖ ಪ್ರವಾಸಿ ತಾಣವಾಗಿರುವ ಆಗುಂಬೆ, ಕಾರ್ಕಳ ಭಾಗಗಳಲ್ಲಿ ಸಮರ್ಪಕ ರಸ್ತೆ ಸೌಲಭ್ಯ ಇಲ್ಲದೆ ಪ್ರಯಾಣಿಕರು, ಸ್ಥಳೀಯರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದರು. ಹಲವು ವರ್ಷಗಳಿಂದ ಮಾಳ ಗೇಟ್‌ನಿಂದ ಕಾರ್ಕಳದವರೆಗೆ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಒತ್ತಾಯ ಮಾಡಲಾಗುತ್ತಿತ್ತು, ಈಗ ಕೇಂದ್ರ ಸರ್ಕಾರ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿಯೇ 177.94 ಕೋಟಿ ರೂಪಾಯಿ ಅನುದಾನ ನೀಡಿದೆ.

ಬೈಂದೂರು - ರಾಣೆಬೆನ್ನೂರು ವಿಭಾಗದಲ್ಲಿ ರಸ್ತೆ ಸುರಕ್ಷತೆಗಾಗಿ, ಅಪಘಾತಗಳ ನಿಯಂತ್ರಣಕ್ಕಾಗಿ 4.89 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಹು ಬೇಡಿಕೆಯ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿ, ಅನುದಾನ ಬಿಡುಗಡೆ ಮಾಡಿರುವುದಕ್ಕೆ ಕೇಂದ್ರ ಸರ್ಕಾರ ಹಾಗೂ ಸಚಿವ ನಿತಿನ್ ಗಡ್ಕರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+