ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇಗರವಳ್ಳಿ-ಆಗುಂಬೆ ರಸ್ತೆ ಅಭಿವೃದ್ಧಿಗೆ ಕೇಂದ್ರದ ಅನುದಾನ

|
Google Oneindia Kannada News

ಉಡುಪಿ, ಜೂನ್ 1: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಒಟ್ಟು 279.03 ಕೋಟಿ ರೂಪಾಯಿ ಮಂಜೂರು ಮಾಡಿದೆ.

ಕೇಂದ್ರ ಭೂ ಸಾರಿಗೆ ಇಲಾಖೆ ರಸ್ತೆ ಅಭಿವೃದ್ಧಿಗಾಗಿ ಹಣ ಮಂಜೂರು ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಆಗುಂಬೆ ಘಾಟ್‌ನಲ್ಲಿ ಅಪಘಾತ, ಪ್ರಪಾತಕ್ಕೆ ಮುಖ ಮಾಡಿ ನಿಂತ ಲಾರಿ ಆಗುಂಬೆ ಘಾಟ್‌ನಲ್ಲಿ ಅಪಘಾತ, ಪ್ರಪಾತಕ್ಕೆ ಮುಖ ಮಾಡಿ ನಿಂತ ಲಾರಿ

2022ರ ಜನವರಿಯಲ್ಲಿ ಶೋಭಾ ಕರಂದ್ಲಾಜೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದರು.

ರಸ್ತೆ ಗುಂಡಿ ಮುಚ್ಚುವ ವಿಚಾರ: ಮತ್ತೆ ಪಾಲಿಕೆಗೆ ಹೈಕೋರ್ಟ್ ತರಾಟೆ ರಸ್ತೆ ಗುಂಡಿ ಮುಚ್ಚುವ ವಿಚಾರ: ಮತ್ತೆ ಪಾಲಿಕೆಗೆ ಹೈಕೋರ್ಟ್ ತರಾಟೆ

agumbe

ಸಂಸದೆ ಶೋಭಾ ಕರಂದ್ಲಾಜೆ ಕೋರಿಕೆಯನ್ನು ಪರಿಣಿಸಿರುವ ಸಚಿವ ನಿತಿನ್ ಗಡ್ಕಡಿ ರಸ್ತೆಗಳ ಅಭಿವೃದ್ಧಿಗೆ ಒಟ್ಟು 279.03 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

 ಹಗಲು ರಾತ್ರಿ ಕೆಲಸ ಮಾಡಿ ರಸ್ತೆ ಗುಂಡಿ ಮುಚ್ಚಿ; ಬಿಬಿಎಂಪಿ ಆಯುಕ್ತರು ಹಗಲು ರಾತ್ರಿ ಕೆಲಸ ಮಾಡಿ ರಸ್ತೆ ಗುಂಡಿ ಮುಚ್ಚಿ; ಬಿಬಿಎಂಪಿ ಆಯುಕ್ತರು

ಮೂರು ರಸ್ತೆಗಳ ಅಭಿವೃದ್ಧಿಗೆ ಅನುದಾನ; ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮೇಗರವಳ್ಳಿಯಿಂದ ಆಗುಂಬೆಯವರೆಗೆ ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ವಿಸ್ತರಣೆ ಮಾಡಲು 96.20 ಕೋಟಿ ಅನುದಾನ ಮೀಸಲಿಡಲಾಗಿದೆ. ಈ ರಸ್ತೆ ಶಿವಮೊಗ್ಗ-ಆಗುಂಬೆ ಮೂಲಕ ಉಡುಪಿಯನ್ನು ಸಂಪರ್ಕಿಸುತ್ತದೆ.

ರಾಷ್ಟ್ರೀಯ ಹೆದ್ದಾರಿ 169ರ ಮಾಳ ಗೇಟ್‌ನಿಂದ ಕಾರ್ಕಳದವರೆಗೆ ದ್ವಿಪಥ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು 177.94 ಕೋಟಿ ರೂಪಾಯಿ ಮೀಸಲಿಡಲಾಗಿದೆ.

shobha

ರಾಷ್ಟ್ರೀಯ ಹೆದ್ದಾರಿ 766-ಸಿ, ಬೈಂದೂರು - ರಾಣೆಬೆನ್ನೂರು ವಿಭಾಗದಲ್ಲಿ ರಸ್ತೆ ಸುರಕ್ಷತಾ ಕಾಮಗಾರಿಗಾಗಿ 4.89 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ಪ್ರಮುಖ ಪ್ರವಾಸಿ ತಾಣವಾಗಿರುವ ಆಗುಂಬೆ, ಕಾರ್ಕಳ ಭಾಗಗಳಲ್ಲಿ ಸಮರ್ಪಕ ರಸ್ತೆ ಸೌಲಭ್ಯ ಇಲ್ಲದೆ ಪ್ರಯಾಣಿಕರು, ಸ್ಥಳೀಯರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದರು. ಹಲವು ವರ್ಷಗಳಿಂದ ಮಾಳ ಗೇಟ್‌ನಿಂದ ಕಾರ್ಕಳದವರೆಗೆ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮಾಡಲು ಒತ್ತಾಯ ಮಾಡಲಾಗುತ್ತಿತ್ತು, ಈಗ ಕೇಂದ್ರ ಸರ್ಕಾರ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿಯೇ 177.94 ಕೋಟಿ ರೂಪಾಯಿ ಅನುದಾನ ನೀಡಿದೆ.

ಬೈಂದೂರು - ರಾಣೆಬೆನ್ನೂರು ವಿಭಾಗದಲ್ಲಿ ರಸ್ತೆ ಸುರಕ್ಷತೆಗಾಗಿ, ಅಪಘಾತಗಳ ನಿಯಂತ್ರಣಕ್ಕಾಗಿ 4.89 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಹು ಬೇಡಿಕೆಯ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿ, ಅನುದಾನ ಬಿಡುಗಡೆ ಮಾಡಿರುವುದಕ್ಕೆ ಕೇಂದ್ರ ಸರ್ಕಾರ ಹಾಗೂ ಸಚಿವ ನಿತಿನ್ ಗಡ್ಕರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ತಿಳಿಸಿದ್ದಾರೆ.

English summary
Union government has released grants to the development of the Udupi-Chikkamagaluru lok sabha constituency. A total of Rs 279.03 crore has been sanctioned for the development of national highways across the sector.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X