ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ: ಜು.1ರಿಂದ ಖಾಸಗಿ ಬಸ್ ಸಂಚಾರ ಆರಂಭಕ್ಕೆ ಗ್ರೀನ್‌ಸಿಗ್ನಲ್

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 25: ಕೋವಿಡ್- 19 ಲಾಕ್‌ಡೌನ್‌ನಿಂದ ಖಾಸಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್‌ಲಾಕ್ ಆದರೂ ಬಸ್‌ಗಳ ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ಇಂದು ಉಡುಪಿಯಲ್ಲಿ ಸಭೆ ನಡೆಸಲಾಯಿತು.

ಜೂ. 21ರಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯ ಜೂ. 21ರಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯ

ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಕಷ್ಟಪಡುವುದನ್ನು ಗಮನಿಸಿದ ಉಡುಪಿ ಶಾಸಕ ಕೆ. ರಘುಪತಿ ಭಟ್, ಖಾಸಗಿ ಬಸ್ ಸಂಚಾರ ಪುನರಾರಂಭಿಸಲು ಇಂದು ಉಡುಪಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲೀಕರ ಸಂಘದವರೊಂದಿಗೆ ಸಭೆ ನಡೆಸಿದರು.

Udupi: Green Signal To Start Private Bus Service From July 1

ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಬಸ್‌ನಲ್ಲಿ ದೈಹಿಕ ಅಂತರವನ್ನು ಕಾಯ್ದುಕೊಂಡು ಜುಲೈ 1ರಿಂದ ಉಡುಪಿ ಜಿಲ್ಲೆಯಲ್ಲಿ ಬಸ್ ಆರಂಭಿಸಲು ನಿರ್ಣಯಿಸಲಾಯಿತು.

Udupi: Green Signal To Start Private Bus Service From July 1

Recommended Video

ನ್ಯೂಜಿಲೆಂಡ್ ವಿರುದ್ಧ ಸೇಡು ತೀರಿಸಿಕೊಳ್ಳೋದಕ್ಕೆ ಟೀಮ್ ಇಂಡಿಯಾಗೆ ಸಿಕ್ತು ಮತ್ತೊಂದು ಚಾನ್ಸ್ | Oneindia Kannada

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಜೆ.ಪಿ ಗಂಗಾಧರ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ, ಉಡುಪಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಪದಾಧಿಕಾರಿಗಳಾದ ಸದಾನಂದ ಚಾತ್ರ, ಪ್ರಸಾದ್ ಬಲ್ಲಾಳ್, ಶಿವರಾಮ ಶೆಟ್ಟಿ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.

English summary
It was decided to start a bus in Udupi district from July 1 with the covid guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X