ಉಡುಪಿ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ಮಿಸ್ ಫೈರಿಂಗ್: ಮಳಿಗೆ ಸಿಬ್ಬಂದಿಗೆ ಗುಂಡೇಟು
ಉಡುಪಿ, ಡಿಸೆಂಬರ್ 30: ಉಡುಪಿ ನಗರದ ಬನ್ನಂಜೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ಮಿಸ್ ಫೈರಿಂಗ್ ಆಗಿ ಓರ್ವ ವ್ಯಕ್ತಿಗೆ ಗುಂಡು ತಗುಲಿದೆ. ಗುಂಡೇಟು ತಗುಲಿದ ಗಾಯಾಳುವನ್ನು ಉಡುಪಿಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜಯಲಕ್ಷ್ಮೀ ಸಿಲ್ಕ್ ನಲ್ಲಿ ಮಳಿಗೆಯ ಶೌಚಾಲಯದಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿತ್ತು. ವಾರಸುದಾರರಿಲ್ಲದ ಪಿಸ್ತೂಲ್ ಕಂಡ ಸಿಬ್ಬಂದಿ ಎತ್ತಿಕೊಂಡು ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಮಿಸ್ ಫೈಯರ್ ಆಗಿದ್ದು, ಸಿಬ್ಬಂದಿ ಕೈಗೆ ಗುಂಡು ತಗುಲಿದೆ. ಘಟನೆಯಲ್ಲಿ ದುರ್ಗಪ್ಪ ಎನ್ನುವಾತ ಗಾಯಗೊಂಡಿದ್ದು, ಕೂಡಲೇ ಆತನನ್ನು ಉಡುಪಿಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್ನ್ನು ವಶಕ್ಕೆ ಪಡೆದಿದ್ದಾರೆ. ಈ ಗನ್ ಯಾರದ್ದು? ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವುದರ ಕುರಿತು ತನಿಖೆ ಆರಂಭಿಸಿದ್ದಾರೆ. ಇಂತಹ ಘಟನೆ ಈ ಹಿಂದೆ ಕೂಡ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ನಡೆದಿತ್ತು ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೈಂದೂರಿನಲ್ಲಿ ಭೀಕರ ಅಪಘಾತ: ಓರ್ವ ಸಾವು
ಉಡುಪಿ: ಬೈಂದೂರು ಕಂಬದಕೋಣೆ ರಾ.ಹೆದ್ದಾರಿ 66ರಲ್ಲಿ ಕಾರೊಂದು ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನ ಚಾಲಕ ಗಂಭೀರ ಗಾಯಗೊಂಡ ಘಟನೆ ಕಂಬದಕೋಣೆ ಜಂಕ್ಷನ್ ಸಮೀಪ ನಡೆದಿದೆ.
ಕಾರವಾದದಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದು ಪರಿಣಾಮ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಪ್ರದ್ಯೋತ್ ಮೃತ ಕಾರು ಚಾಲಕ ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಕಾರಿನೊಳಕ್ಕೆ ಸಿಲುಕಿದ ವ್ಯಕ್ತಿಯನ್ನು ಹೊರ ತೆಗೆದು ಬೈಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರು. ಆದರೆ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಮಾರ್ಗ ಮಧ್ಯೆ ಪ್ರದ್ಯೋತ್ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬೈಂದೂರು ಪಿ.ಎಸ್.ಐ ತಿಮ್ಮೇಶ್ ಬಿ.ಎನ್.ಮತ್ತು ಸಿಬ್ಬಂದಿ ವರ್ಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications