ಮುನಿಸಿಕೊಂಡವರ ಬಗ್ಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದೇನು ಗೊತ್ತೆ?

Posted By: ಉಡುಪಿ ಪ್ರತಿನಿಧಿ
Subscribe to Oneindia Kannada

ಉಡುಪಿ, ಏಪ್ರಿಲ್ 12: "ಉಡುಪಿಯ ಕುಂದಾಪುರದಲ್ಲಿ ಬಿಜೆಪಿ ಭಿನ್ನಮತ ವಿಚಾರ ಪಕ್ಷದೊಳಗಿನ ಭಿನ್ನಮತವನ್ನು ರಾಜ್ಯಾಧ್ಯಕ್ಷರು ಶಮನ ಮಾಡುತ್ತಾರೆ. ಅಧಿಕೃತ ಅಭ್ಯರ್ಥಿಯಾಗಿ ನನ್ನ ಹೆಸರು ಘೋಷಣೆಯಾಗಿದೆ. ಅತೀ ಹೆಚ್ಚು ಅಂತರದಲ್ಲಿ ಗೆಲ್ಲುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕೆಲಸ ಮಾಡುತ್ತೇನೆ. ಭಿನ್ನಮತೀಯರು ಪಕ್ಷದಲ್ಲಿ ಇದ್ದಾರೋ ಇಲ್ಲವೋ ಅವರೇ ತೀರ್ಮಾನಿಸಲಿ".

ಉಪವಾಸ ಕೂತ ಶೋಭಾ ಕರಂದ್ಲಾಜೆಯಿಂದ ಕಾಂಗ್ರೆಸ್ ವಿರುದ್ದ ವಾಗ್ದಾಳಿ

-ಹಾಲಾಡಿ ಶ್ರೀನಿವಾಸ ಶೆಟ್ಟಿ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ. ಕುಂದಾಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರವಾಗಿ ಅಸಮಾಧಾನಗೊಂಡು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದ ಬಿಜೆಪಿ ಮುಖಂಡರ ನಡೆ ಮತ್ತು ರಾಜಕೀಯ ಗುರು ಎ.ಜಿ.ಕೊಡ್ಗಿ ಅವರ ಅಸಮಾಧಾನ ಕುರಿತು ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡ ಅವರು ಪ್ರತಿಕ್ರಿಯಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಪಕ್ಷದಲ್ಲಿದ್ದರೆ ಅಭ್ಯರ್ಥಿ ಪರ ಕೆಲಸ ಮಾಡಬೇಕು. ಪಕ್ಷ ತೊರೆದವರಿಂದ ಯಾವ ಹಾನಿಯಾಗುತ್ತದೆ ಎಂದು ಜನರಿಗೆ ಗೊತ್ತು ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿಕೆ ನೀಡಿದ್ದಾರೆ.

Halady Srinivasa Shetty reaction to difference of opinion in the party

ಕಿಶೋರ್ ಕುಮಾರ್ ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ನಿಂತಿದ್ದರು. ಚುನಾವಣೆ ಸಂದರ್ಭದಲ್ಲಿ ಎಲ್ಲರ ಸಹಾಯ ಬೇಕು. ಪಕ್ಷದ ಹಿರಿಯ ನಾಯಕ ಎ.ಜಿ ಕೊಡ್ಗಿಯನ್ನು ಭೇಟಿಯಾಗಿದ್ದೇನೆ. ಕೊಡ್ಗಿಯವರ ಆಶೀರ್ವಾದ ಪಡೆದು ಬಂದಿದ್ದೇನೆ. ಎ.ಜಿ.ಕೊಡ್ಗಿಯವರು ಹಿರಿಯರು. ಅವರ ಮೇಲೆ ಗೌರವವಿದೆ. ಎಲ್ಲಾ ಕಡೆ ಸ್ವಲ್ಪ ಅಸಮಾಧಾನ ಇರುತ್ತದೆ. ನಿತ್ಯ ಜನರ ಕೆಲಸ ಮಾಡಿದ್ದೇನೆ. ಚುನಾವಣಾ ಸಂದರ್ಭದಲ್ಲಿ ವಿಶೇಷ ಪ್ರಚಾರ ಮಾಡುವುದಿಲ್ಲ ಎಂದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Assembly Elections 2018: Party president will solve the issue, BJP candidate for Kundapura Halady Srinivasa Shetty reaction to difference of opinion in the party.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ