• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಳೆಯಿಂದ ಕುಂದಾಪುರದಲ್ಲಿ ನೆರೆ; ಕುದ್ರು ನಡುಗಡ್ಡೆಯಲ್ಲಿ ಬಂಧಿಯಾದ ಜನ

By ಉಡುಪಿ ಪ್ರತಿನಿಧಿ
|

ಉಡುಪಿ, ಆಗಸ್ಟ್‌ 05: ಕಳೆದ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಬಿರುಗಾಳಿ ಮಳೆಗೆ ಹಲವೆಡೆ ಕೃತಕ ನೆರೆ ಉಂಟಾಗಿದ್ದು, ಕುಂದಾಪುರದ ನಾವುಂದ ಗ್ರಾಮದ ಹಲವು ಹಳ್ಳಿಗಳು ಜಲಾವೃತಗೊಂಡಿವೆ.

ಮುಖ್ಯವಾಗಿ‌ ಕುಂದಾಪುರ ತಾಲೂಕಿನ ನಾವುಂದ ಗ್ರಾಮದ ಸಾಲ್ಬುಡ, ಬಾಂಗ್, ಕುದ್ರು, ಹಡವು ಮುಂತಾದೆಡೆಗಳಲ್ಲಿ ಕಾಣಿಸಿಕೊಂಡ ಕೃತಕ ನೆರೆಗೆ ಗ್ರಾಮಸ್ಥರು ಪರದಾಡುವಂತಾಗಿದೆ. ಮಳೆ ಮುಂದುವರಿದ ಕಾರಣ ನೆರೆ ನೀರು ಏರುತ್ತಲೇ ಇದೆ. ಜನರಿಗೆ ಮಾತ್ರವಲ್ಲದೆ ಜಾನುವಾರುಗಳಿಗೂ ಇದರಿಂದ ತೊಂದರೆಯಾಗಿದೆ. ಈ ಗ್ರಾಮಗಳ ಸಂಪರ್ಕ ಕಲ್ಪಿಸುವ ರಸ್ತೆಗಳು ನೆರೆ ನೀರಿನಿಂದ ಆವೃತಗೊಂಡಿದ್ದು ಜನರು ಹೊರ ಬರುವುದೂ ಕಷ್ಟವಾಗಿದೆ.

ಈ ಭಾಗದ ಕುದ್ರು ಎಂದು ಕರೆಯಲ್ಪಡುವ ನಡುಗಡ್ಡೆಗಳಲ್ಲಿ ಜನರು ಅಕ್ಷರಶಃ ಬಂಧಿಯಾಗಿದ್ದಾರೆ. ಜಿಲ್ಲೆಯಲ್ಲಿ ನಿನ್ನೆಯಿಂದಲೇ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನದೀಪಾತ್ರದ ಜನ ಜಾಗರೂಕರಾಗಿರುವಂತೆ ಸೂಚನೆ ನೀಡಲಾಗಿದೆ. ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. ಕಳೆದ ಎರಡು ವಾರಗಳಿಂದ ಮಳೆಗಾಗಿ ಆಕಾಶ ನೋಡುತ್ತಿದ್ದ ಜಿಲ್ಲೆಯ ಜನ ಕಳೆದೆರಡು ದಿನಗಳ ಮಳೆಯಿಂದ ಹೈರಾಣಾಗಿದ್ದಾರೆ.

English summary
Heavy rain have been reported in Udupi district for the past three days. Many villages in Kundapur have been submerged due to the artificial deluge,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X