ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತ; ಆರೆಂಜ್ ಅಲರ್ಟ್ ಘೋಷಣೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜುಲೈ 4: ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿದ್ದು, ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ.

ನಿನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಲವು ಕಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನಗರದ ಕಲ್ಸಂಕ, ಬೈಲಕೆರೆಯಲ್ಲಿ ನೆರೆ ಸೃಷ್ಟಿಯಾಗಿದ್ದು, ಜನರು ಭಯಭೀತರಾಗಿದ್ದಾರೆ.

ಉಡುಪಿಯಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆಉಡುಪಿಯಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

Orange Alert Issued In Udupi Due To Heavy Rain

ಬೈಲಕೆರೆಯಲ್ಲಿ ನೀರು ಅಪಾಯದ ಮಟ್ಟಕ್ಕೆ ಹರಿಯುತ್ತಿದೆ. ಹೀಗಾಗಿ ಜನರಿಗೆ ಹೊರಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ ವರ್ಷಂಪ್ರತಿ ಇದೇ ಸಮಸ್ಯೆ, ಈ ಬಾರಿ ಲಾಕ್ ಡೌನ್ ನಿಂದಾಗಿ ಹೊರ ಹೋಗಲಾಗಿರಲಿಲ್ಲ. ಈಗ ನೋಡಿದರೆ ನೆರೆ ಬಂದು ಮನೆಯೊಳಗೆ ನೀರು ಬರುತ್ತಿದೆ. ನಗರಸಭೆಗೆ ಈ ವಿಷಯ ಗೊತ್ತಿದ್ದರೂ ಇದನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ ಸ್ಥಳೀಯರು.

English summary
Its raining heavily since yesterday in udupi district. Orange alert has been issued in district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X