ಪ್ರಧಾನಿ ಮೋದಿಯ 'ಪರೀಕ್ಷಾ ಪೇ ಚರ್ಚಾ' ಸಂವಾದಕ್ಕೆ ಉಡುಪಿಯ ಗ್ರಾಮೀಣ ಪ್ರದೇಶದ ಅನುಷಾ ಆಯ್ಕೆ
ಉಡುಪಿ, ಮಾರ್ಚ್ 19: ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಕರಾವಳಿ ಜಿಲ್ಲೆ ಉಡುಪಿಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ಅನುಷಾ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿ ಅನುಷಾ ಉಡುಪಿ ಜಿಲ್ಲೆಯ ಆಲ್ಬಾಡಿ-ಆರ್ಡಿಯ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರ್ಕಾರಿ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿನಿ.
ಮಡಾಮಕ್ಕಿ ಸಮೀಪದ ಕೃಷ್ಣ ಕುಲಾಲ ಮತ್ತು ಜಯಲಕ್ಷ್ಮೀ ಕೆ.ಕುಲಾಲ ಮಗಳಾದ ಅನುಷಾ ಪ್ರತಿಭಾವಂತ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿದ್ದಾಳೆ. ಗ್ರಾಮೀಣ ಪ್ರದೇಶದಲ್ಲಿರುವ ಕೃಷ್ಣ ಕುಲಾಲ ಕೂಲಿ ಕೆಲಸಗಾರರಾಗಿದ್ದು, ತಾಯಿ ಜಯಲಕ್ಷ್ಮಿ ಗೇರು ಬೀಜ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಈಗಾಗಲೇ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಪಾಲ್ಗೊಳ್ಳಲು ಹತ್ತು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಅರ್ಜಿ ಹಾಕಿದ್ದು, ಅದರಲ್ಲಿ 30 ವಿದ್ಯಾರ್ಥಿಗಳು ಪ್ರಧಾನಿ ಜೊತೆ ನೇರ ಸಂವಾದ ನಡೆಸಲು ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಇಬ್ಬರು ಆಯ್ಕೆ ಆಗಿದ್ದು, ಓರ್ವ ವಿದ್ಯಾರ್ಥಿ ಬೆಂಗಳೂರಿನವರಾಗಿದ್ದರೆ, ಮತ್ತೋರ್ವ ವಿದ್ಯಾರ್ಥಿನಿ ಉಡುಪಿ ಜಿಲ್ಲೆಯ ಅನುಷಾ.

Recommended Video
ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿ ಅನುಷಾಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.












Click it and Unblock the Notifications