ಉಡುಪಿ; ಟೋಲ್ ಕಂಪನಿಗೆ ಸೆಡ್ಡು, ಉಚಿತ ರಸ್ತೆ ನಿರ್ಮಾಣ!
ಉಡುಪಿ, ಏಪ್ರಿಲ್ 2; ಹೆಜಮಾಡಿ ಟೋಲ್ ಗೇಟ್‌ನ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ನವಯುಗ್ ಕಂಪನಿಯ ವಿರುದ್ಧ ತಿರುಗಿ ಬಿದ್ದಿರುವ ಗ್ರಾಮಸ್ಥರು ಉಚಿತ ರಸ್ತೆಯನ್ನು ನಿರ್ಮಾಣ ಮಾಡಿದ್ದಾರೆ.
ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡಬೇಕು ಎಂಬ ಹೋರಾಟ ನಡೆಯುತ್ತಿತ್ತು. ಹೆಜಮಾಡಿ ಗ್ರಾಮ ಪಂಚಾಯಿತಿ ನವಯುಗ್ ಕಂಪನಿಗೆ ಸ್ಥಳೀಯ ಗುರುತಿನ ಚೀಟಿ ಇರುವ ವಾಹನಗಳಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿತ್ತು.
ಟೋಲ್ ಕಂಪನಿ ಇದಕ್ಕೆ ಸ್ಪಂದಿಸಲಿಲ್ಲ. ಇದರಿಂದ ರೊಚ್ಚಿಗೆದ್ದ ಜನರು ಟೋಲ್ ಗೇಟ್ ಪಕ್ಕದಲ್ಲಿದ್ದ ಖಾಸಗಿ ಜಮೀನಿನಲ್ಲಿ ಉಚಿತ ರಸ್ತೆಯನ್ನು ನಿರ್ಮಾಣ ಮಾಡಲು ಆರಂಭಿಸಿದರು. ಟೋಲ್ ಕಂಪನಿ ಇದರಿಂದ ಬೆಚ್ಚಿ ಬಿದ್ದಿದೆ.

ಹೆಜಮಾಡಿ ಸ್ಥಳೀಯ ವಿಳಾಸದ ಗುರುತಿನ ಚೀಟಿ ಇರುವ ವಾಹನಗಳಿಗೆ ಟೋಲ್ ಫ್ರೀ ಎಂದು ಲಿಖಿತವಾಗಿ ಹೋರಾಟ ನಡೆಸುತ್ತಿದ್ದವರಿಗೆ ಭರವಸೆ ಕೊಟ್ಟಿದೆ. ಗ್ರಾಮಸ್ಥರು ನಿರ್ಮಿಸಿದ ಉಚಿತ ರಸ್ತೆಯನ್ನು ಮುಚ್ಚಲು ಟೋಲ್ ಸಿಬ್ಬಂದಿ ಪ್ರಯತ್ನ ನಡೆಸಿದರು. ಗ್ರಾಮಸ್ಥರ ವಿರೋಧದಿಂದಾಗಿ ಸುಮ್ಮನಾದರು.
ಸ್ಥಳೀಯ ವಾಹನಗಳಿಗೆ ಟೋಲ್ ಫ್ರೀ ಎಂದು ಲಿಖಿತ ಉತ್ತರ ನೀಡುವ ತನಕ ರಸ್ತೆ ಬಂದ್ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು. ಇದರಿಂದಾಗಿ ನವಯುಗ್ ಕಂಪನಿ ವಾಹನಗಳಿಗೆ ವಿನಾಯಿತಿ ನೀಡುವುದಾಗಿ ಲಿಖಿತ ಭರವಸೆಯನ್ನು ನೀಡಿತು.
ಹೆಜಮಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಾಣೇಶ್ ಹೆಜಮಾಡಿ ನೇತೃತ್ವದಲ್ಲಿ ಎಲ್ಲಾ ಸದಸ್ಯರು ಟೋಲ್ ರಸ್ತೆಯ ಪಕ್ಕದಲ್ಲೇ ಉಚಿತ ರಸ್ತೆಯನ್ನು ನಿರ್ಮಾಣ ಮಾಡಿದರು. ಈ ಮೂಲಕ ಟೋಲ್ ಕಂಪನಿಗೆ ತಕ್ಕ ಪಾಠವನ್ನು ಕಲಿಸಿದರು.
ಟೋಲ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ಶಿವಪ್ರಸಾದ್ ಮೇಲಾಧಿಕಾರಿಗಳ ಜೊತೆ ಮಾತನಾಡಿ ಸ್ಥಳೀಯ ವಾಹನಗಳಿಗೆ ಟೋಲ್ ಶುಲ್ಕದಿಂದ ವಿನಾಯಿತಿ ಕೊಡಿಸಿದ್ದಾರೆ. ಈ ಕುರಿತ ಪತ್ರವನ್ನು ಕಂಪನಿಯಿಂದ ನೀಡಲಾಗಿದೆ.
ಹೆಜಮಾಡಿ ಮತ್ತು ಸುರತ್ಕಲ್ ಟೋಲ್‌ಗಳನ್ನು ವಿಲೀನಗೊಳಿಸಬೇಕು ಎಂಬ ಬೇಡಿಕೆ ಹಾಗೆಯೇ ಇದೆ. ಸುರತ್ಕಲ್ ಟೋಲ್ ಬಗ್ಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೆಲವು ದಿನಗಳ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಚರ್ಚೆ ನಡೆಸಿದ್ದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications