ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ಹೆಪ್ಸಿಬಾ ರಾಣಿ ಕೊರ್ಲಪಾಟಿ

|
Google Oneindia Kannada News

ಉಡುಪಿ, ಫೆಬ್ರವರಿ 05: ಉಡುಪಿಯ ಜಿಲ್ಲಾಧಿಕಾರಿ ಪ್ರಿಯಾಂಕಾ ಫ್ರಾನ್ಸಿಸ್ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಈಗ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್‌ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.

ಸರ್ಕಾರಿ ಶಾಲೆಯೇ ಸಾಕು: ಮಾದರಿಯಾದರು ಈ ಮಹಿಳಾ ಜಿಲ್ಲಾಧಿಕಾರಿಸರ್ಕಾರಿ ಶಾಲೆಯೇ ಸಾಕು: ಮಾದರಿಯಾದರು ಈ ಮಹಿಳಾ ಜಿಲ್ಲಾಧಿಕಾರಿ

ಹೆಪ್ಸಿಬಾ ರಾಣಿ ಕೊರ್ಲಪಾಟಿ ಪ್ರಸ್ತುತ ಹುಬ್ಬಳ್ಳಿ-ಧಾರವಾಡದ ವಿಶೇಷ ಉದ್ದೇಶ ವಾಹನದ ಆಡಳಿತ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹೆಪ್ಸಿಬಾ ರಾಣಿ ಕೊರ್ಲಪಾಟಿ ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

 ಡಿಸಿಗಳಿಗೂ ಗ್ರಾಮ ವಾಸ್ತವ್ಯ ಕಡ್ಡಾಯ: ಡಿಸಿಎಂ ಪರಮೇಶ್ವರ ಡಿಸಿಗಳಿಗೂ ಗ್ರಾಮ ವಾಸ್ತವ್ಯ ಕಡ್ಡಾಯ: ಡಿಸಿಎಂ ಪರಮೇಶ್ವರ

ಹೆಪ್ಸಿಬಾ ರಾಣಿ ಕೊರ್ಲಪಾಟಿ ಸದ್ಯದಲ್ಲೇ ಉಡುಪಿಯ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಘನ ಮತ್ತು ದ್ರವ ತ್ಯಾಜ್ಯವನ್ನು ಸಂಪನ್ಮೂಲವಾಗಿ ಪರಿವರ್ತಿಸುವ ಮಾದರಿ ಯೋಜನೆಗೆ ಚಾಲನೆಯನ್ನು ಜಿಲ್ಲಾಪಂಚಾಯತ್ ನ ಸಿಇಒ ಆಗಿದ್ದಾಗ ಪ್ರೀಯಾಂಕಾ ಮೇರಿ ಚಾಲನೆ ನೀಡಿದ್ದರು.

Hephsiba Rani Korlapati has been transferred as the new DC of Udupi

ಜಿಲ್ಲಾಧಿಕಾರಿಯಾಗಿ 2 ವರ್ಷ ಸೇವೆಸಲ್ಲಿಸಿದ ಪ್ರಿಯಾಂಕಾ ಮೇರಿ ಉಡುಪಿ ಜಿಲ್ಲೆಯಲ್ಲಿ ಮರಳು ಸಮಸ್ಯೆ ಪರಿಹಾರಕ್ಕೆ ಕಾನೂನು ರೀತಿಯಲ್ಲೇ ಕ್ರಮ ಕೈಗೊಂಡು ಶಾಸಕರ ಕೆಂಗಣ್ಣಿಗೆ ಕಾರಣರಾಗಿದ್ದರು. ಲೋಕಸಭಾ ಚುನಾವಣೆಯ ಪೂರ್ವ ತಯಾರಿಯಾಗಿ ಈ ವರ್ಗಾವಣೆ ನಡೆಸಲಾಗಿದೆ ಎಂದು ಹೇಳಲಾಗಿದೆ.

English summary
IAS Officer Hephsiba Rani Korlapati has been transferred as the new DC of Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X