ಉಡುಪಿ ನೂತನ ಡಿಸಿಯಾಗಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧಿಕಾರ ಸ್ವೀಕಾರ

ಉಡುಪಿ, ಫೆಬ್ರವರಿ 07: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಹೆಪ್ಸಿಬಾ ರಾಣಿ ಕೊರ್ಲಪಾಟಿ ಇಂದು ಉಡುಪಿಯಲ್ಲಿ ಅಧಿಕಾರ ವಹಿಸಿಕೊಂಡರು . ಉಡುಪಿಯ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿಯಾಗಿ ವರ್ಗಾವಣೆ ಮಾಡಿ ಇತ್ತಿಚೆಗೆ ರಾಜ್ಯ ಸರಕಾರ ಆದೇಶ

ಹೊರಡಿಸಿತ್ತು. ಈ ನಡುವೆ ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್‌ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ರಾಜ್ಯ ಸರಕಾರ ನೇಮಕಮಾಡಿತ್ತು.

ಹುಬ್ಬಳ್ಳಿ-ಧಾರವಾಡದ ವಿಶೇಷ ಉದ್ದೇಶ ವಾಹನದ ಆಡಳಿತ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಪ್ಸಿಬಾ ರಾಣಿ ಕೊರ್ಲಪಾಟಿ ಇಂದು ಗುರುವಾರ ಉಡುಪಿಗೆ ಆಗಮಿಸಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರಿಂದ ಅಧಿಕಾರ ವಹಿಸಿಕೊಂಡರು. ಹೆಪ್ಸಿಬಾ ರಾಣಿ ಕೊರ್ಲಪಾಟಿ ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.

Hephsiba Rani Korlapati taken charge as new DC of Udupi

ಘನ ಮತ್ತು ದ್ರವ ತ್ಯಾಜ್ಯವನ್ನು ಸಂಪನ್ಮೂಲವಾಗಿ ಪರಿವರ್ತಿಸುವ ಮಾದರಿ ಯೋಜನೆಗೆ ಚಾಲನೆಯನ್ನು ಜಿಲ್ಲಾಪಂಚಾಯತ್ ನ ಸಿಇಒ ಆಗಿದ್ದಾಗ ಪ್ರೀಯಾಂಕಾ ಮೇರಿ ಚಾಲನೆ ನೀಡಿದ್ದರು.

Hephsiba Rani Korlapati taken charge as new DC of Udupi

ಜಿಲ್ಲಾಧಿಕಾರಿಯಾಗಿ 2 ವರ್ಷ ಸೇವೆಸಲ್ಲಿಸಿದ ಪ್ರಿಯಾಂಕಾ ಮೇರಿ ಉಡುಪಿ ಜಿಲ್ಲೆಯಲ್ಲಿ ಮರಳು ಸಮಸ್ಯೆ ಪರಿಹಾರಕ್ಕೆ ಕಾನೂನು ರೀತಿಯಲ್ಲೇ ಕ್ರಮ ಕೈಗೊಂಡು ಶಾಸಕರ ಕೆಂಗಣ್ಣಿಗೆ ಕಾರಣರಾಗಿದ್ದರು. ಲೋಕಸಭಾ ಚುನಾವಣೆಯ ಪೂರ್ವ ತಯಾರಿಯಾಗಿ ಈ ವರ್ಗಾವಣೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+