ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುರಾನ್ ಹೇಳಿದಂತೆ ನಡೆಯುತ್ತೇವೆ, ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗಲ್ಲ; ಉಡುಪಿ ವಿದ್ಯಾರ್ಥಿನಿಯರು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮಾರ್ಚ್ 15: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಅಂತಿಮ ತೀರ್ಪು ನೀಡಿದೆ. ಕಾಲೇಜು ಒಳಗೆ ಸಮವಸ್ತ್ರ ಬಿಟ್ಟು ಬೇರೆ ಯಾವುದೇ ವಸ್ತ್ರಗಳಿಗೆ ಅವಕಾಶ ಇಲ್ಲ ಎಂದು ಕೋರ್ಟ್ ಸ್ಪಷ್ಟವಾಗಿ ಉಲ್ಲೇಖಿಸಿದೆ.

ಆದರೆ ಹೈಕೋರ್ಟ್ ಆದೇಶಕ್ಕೆ ಹಿಜಾಬ್ ವಿವಾದ ಆರಂಭಿಸಿದ ಉಡುಪಿ ಕಾಲೇಜಿನ ಆರು ಮಂದಿ ವಿದ್ಯಾರ್ಥಿನಿಯರು ಮಾತ್ರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಉಡುಪಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವುದು ನಮ್ಮ ಧಾರ್ಮಿಕ ಹಕ್ಕು, ಕುರಾನ್ ಹೇಳಿದಂತೆ ನಾವು ನಡೆಯುತ್ತೇವೆ ಎಂದು ಹೇಳಿದ್ದಾರೆ.

ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪಿನ ಕುರಿತು ವಕ್ಫ್ ಬೋರ್ಡ್‌, ಮುಸ್ಲಿಂ ಮುಖಂಡರು ಹೇಳಿದ್ದೇನು?ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪಿನ ಕುರಿತು ವಕ್ಫ್ ಬೋರ್ಡ್‌, ಮುಸ್ಲಿಂ ಮುಖಂಡರು ಹೇಳಿದ್ದೇನು?

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿಜಾಬ್ ವಿದ್ಯಾರ್ಥಿನಿ ಆಲಿಯಾ ಅಸಾದಿ, "ಹೈಕೋರ್ಟ್‌ನಲ್ಲಿ ನಮಗೆ ಹಕ್ಕು ಸಿಗುತ್ತದೆ ಅನ್ನುವ ‌ನಂಬಿಕೆ ಇತ್ತು. ಆದರೆ ನ್ಯಾಯಾಲಯದಲ್ಲಿ ನ್ಯಾಯ ಸಿಕ್ಕಿಲ್ಲ. ನಾವು ನ್ಯಾಯ ಸಿಗುವವರೆಗೂ ಕಾಲೇಜಿಗೆ ಹಿಜಾಬ್ ಇಲ್ಲದೆ ಹೋಗಲ್ಲ. ಕುರಾನ್‌ನಲ್ಲಿ ಹೇಳಿರುವುದರಿಂದ ನಾವು ಹಿಜಾಬ್‌ಗೆ ಶಿಕ್ಷಣ ತ್ಯಾಗ ಮಾಡುತ್ತಿದ್ದೇವೆ. ನಾವು ಇನ್ನು ಮುಂದೆ ನ್ಯಾಯಕ್ಕಾಗಿ ಹೋರಾಟ ‌ಮಾಡುತ್ತೇವೆ,'' ಎಂದು ತಿಳಿಸಿದ್ದಾರೆ.

Udupi: Hijab Students Reaction to Karnataka High Court Verdict on Hijab Row

"ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇತ್ತು. ನಾವು ಹಿಜಬ್ ತೆಗೆದು ಕ್ಲಾಸ್ ಒಳಗೆ ಹೋಗಲ್ಲ. ನಾವು ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಕುರಾನ್‌ನಲ್ಲಿ ದೇಹವನ್ನು ಮುಚ್ಚಬೇಕೆಂಬ ಉಲ್ಲೇಖ ಇದೆ. ಹಿಜಾಬ್ ಅವಶ್ಯಕತೆ ಇಲ್ಲದಿದ್ದರೆ ನಾವು ಹಿಜಾಬ್ ತೊಡುತ್ತಿರಲಿಲ್ಲ. ಹಿಜಾಬ್ ಮುಖ್ಯ ಅಲ್ಲವಾದರೆ ನಾವು ಹೋರಾಟ ಮಾಡುತ್ತಿರಲಿಲ್ಲ. ನಮಗೆ ಶಿಕ್ಷಣ ಬೇಕು, ಹಿಜಾಬ್ ಕೂಡಾ ಬೇಕು,'' ಎಂದು ಆಲಿಯಾ ಅಸಾದಿ ಹೇಳಿದರು.

"ರಾಜಕೀಯ ಲಾಭಕ್ಕೆ ಈ ವಿಚಾರವನ್ನು ಕಮ್ಯೂನಲ್ ಮಾಡಲಾಗಿದೆ. ರಾಜಕೀಯ ದುರುದ್ದೇಶದಿಂದ ದೊಡ್ಡ ವಿಷಯ ಮಾಡಿದ್ದಾರೆ. ಇದರಿಂದ ಎಲ್ಲರ ಶಿಕ್ಷಣಕ್ಕೆ ಬಹಳ ಸಮಸ್ಯೆ ಆಗಿದೆ. ಪ್ರಾಂಶುಪಾಲರು ಹಿಜಾಬ್ ಅವಕಾಶ ಕೊಟ್ಟಿದ್ದರೆ ಈ ಸಮಸ್ಯೆಗಳನ್ನು ಆಗುತ್ತಿರಲಿಲ್ಲ. ಇದು ಹಿಜಾಬ್‌ಗೆ ತಡೆ ಅಲ್ಲ. ಇದು ನಮ್ಮ ಶಿಕ್ಷಣದ ತಡೆ. ನಮಗೆ ಧರ್ಮ ಮತ್ತು ಶಿಕ್ಷಣ ಬಹಳ ಮುಖ್ಯ. ನಮಗೆ ಎರಡೂ ಅವಕಾಶ ಬೇಕು. ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚನೆ ಮಾಡಿದ್ದಾರೆ. ಅಂಬೇಡ್ಕರ್ ಬದುಕಿದ್ದರೆ ಇಂದು ಕಣ್ಣೀರು ಹಾಕುತ್ತಿದ್ದರು. ಸಂವಿಧಾನದ ಈಗಿನ ಪರಿಸ್ಥಿತಿ ನೋಡಿ ಮರುಗುತಿದ್ದರು,'' ಅಂತಾ ಆಲಿಯಾ ತಿಳಿಸಿದರು.

Udupi: Hijab Students Reaction to Karnataka High Court Verdict on Hijab Row

"ನಮ್ಮ ಹಿಜಾಬ್ ಹಕ್ಕಿಗಾಗಿ ಮುಂದಿನ ಹೋರಾಟ ಮಾಡುತ್ತೇವೆ. ನಮ್ಮ ಸಂವಿಧಾನ ಹಕ್ಕಿಗಾಗಿ ಹೋರಾಡುತ್ತೇವೆ. ನಾವು ನಮ್ಮ ಕುರಾನ್ ಅನುಸರಿಸುತ್ತೇವೆ. ನಾವು ಸರಕಾರದ ಆದೇಶ ಅನುಸರಿಸಬೇಕಾಗಿಲ್ಲ. ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ಬೇಕು. ನಾವು ಎರಡು ತಿಂಗಳು ಮನೆಯಲ್ಲೇ ತಯಾರು ಮಾಡುತ್ತಿದ್ದು, ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ. ನಾವು ಹೈಕೋರ್ಟ್‌ಗೆ ಹಿಜಾಬ್‌ಗಾಗಿ ಹೋದೆವು. ನಮ್ಮ ನಿರೀಕ್ಷೆ ವಿರುದ್ಧ ತೀರ್ಪು ಬಂದಿದೆ. ನಾವು ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗಲ್ಲ. ನಮಗೆ ಇಂದು ಅನ್ಯಾಯವಾಗಿದೆ. ನಾವು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದೆವು ನಮ್ಮ ದೇಶದಲ್ಲೇ ನಮಗೆ ಅನ್ಯಾಯ ಆಗಿದೆ ಎಂದು ಅನ್ನಿಸುತ್ತಿದೆ,'' ಅಂತಾ ಮತ್ತೋರ್ವ ವಿದ್ಯಾರ್ಥಿನಿ ಅಲ್ಮಾಸ್ ಹೇಳಿದ್ದಾರೆ.

"ದೇಶದಲ್ಲಿ ನಮಗೆ ನ್ಯಾಯ ಇಲ್ಲ ಎಂದು ಅನ್ನಿಸುತ್ತಿದೆ. ಕಳೆದ ಎರಡು ತಿಂಗಳು ಸಮಸ್ಯೆ ಅನುಭವಿಸಿದ್ದೇವೆ. ನಮ್ಮನ್ನು ಬೇರೆಯೇ ರೀತಿಯಲ್ಲಿ ನೋಡುತ್ತಿದ್ದಾರೆ. ನಾವು ಡಿಸಿ, ಡಿಡಿಪಿಐ ಭೇಟಿ ಮಾಡಿದರೂ ನಮಗೆ ನಮ್ಮ ನ್ಯಾಯ ಸಿಗಲಿಲ್ಲ. ನಾವು ಜಾತ್ಯಾತೀತ ದೇಶದಲ್ಲಿ ಇದ್ದೇವೆ. ಎಲ್ಲಾ ಧರ್ಮಕ್ಕೆ ಎಲ್ಲರೂ ಗೌರವ ಕೊಡಬೇಕು. ತಮ್ಮ ಮುಂದಿನ ನಡೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಾವು ನಮ್ಮ ವಕೀಲರ ಜೊತೆ ಚರ್ಚೆ ಮಾಡುತ್ತಿದ್ದೇವೆ. ನಾವು ಈಗಾಗಲೇ ಯಾವುದೇ ತೀರ್ಮಾನವನ್ನು ಕೈಗೊಂಡಿಲ್ಲ. ಈಗ ಬಂದ ತೀರ್ಪಿನಿಂದ ನಾವು ಬಹಳ ನೊಂದಿದ್ದೇವೆ,'' ಎಂದು ಹಿಜಾಬ್ ಹೋರಾಟಗಾರ್ತಿ ಅಲ್ಮಾಸ್ ಹೇಳಿದ್ದಾರೆ.

English summary
Udupi: 6 Hijab Students Outraged against Karnataka High Court Verdict on Hijab Row.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X