ಉಡುಪಿ-ಕಾರವಾರ ರಸ್ತೆಯಲ್ಲಿ ಗುಡ್ಡ ಕುಸಿತ, ಸಂಚಾರ ಸ್ಥಗಿತ
ಉಡುಪಿ, ಜೂನ್ 07 : ನಿರಂತರ ಮಳೆ ಸುರಿಯುತ್ತಿರುವುದರಿಂದ ರಾಷ್ಟ್ರೀಯ ಹೆದ್ದಾರಿ 66 ಉಡುಪಿ ಹಾಗೂ ಕಾರವಾರ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಇದರಿಂದ ಸಂಚಾರ ಸ್ಥಗಿತಗೊಂಡಿದೆ.
ತುಂತುರು ಮಳೆಯಿಂದಾಗಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಒತ್ತಿನೆಣೆ ಗ್ರಾಮದ ಬಳಿ ಹಂತ-ಹಂತವಾಗಿ ಗುಡ್ಡ ಕುಸಿಯುತ್ತಿದೆ. ಕುಸಿತದಿಂದಾಗಿ ಉಡುಪಿ- ಕಾರವಾರ- ಗೋವಾ ಸಂಪರ್ಕ ಮಾಡುವ ಈ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸ್ಥಗಿತಗೊಂಡಿವೆ.

ಸಾಲುಗಟ್ಟಿ ನಿಂತಿರುವ ನೂರಾರು ವಾಹನಗಳನ್ನು ಗುಡ್ಡದ ಕಡೆ ಬಾರದಂತೆ ಪೊಲೀಸರು ಸುರಕ್ಷತಾ ಕ್ರಮ ಕೈಗೊಂಡಿದ್ದಾರೆ. ಮಣ್ಣು ತೆಗೆಯುವ ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿದೆ.












Click it and Unblock the Notifications