ಉಡುಪಿಯಲ್ಲಿ ಮುಂದುವರೆದ ಮಳೆ; ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ, ಜುಲೈ 23: ಉಡುಪಿ ಜಿಲ್ಲೆಯಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಕಳೆದ 5 ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಇಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಹವಾಮಾನ ಇಲಾಖೆಯು ಮಳೆ ಮುಂದುವರಿಯುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಜುಲೈ 24ರಂದು ಕೂಡ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ ಒಟ್ಟು 135 ಮಿಲಿ ಮೀಟರ್ ಸರಾಸರಿ ಮಳೆ ದಾಖಲಾಗಿದೆ. ಕುಂದಾಪುರದಲ್ಲಿ ಅತೀ ಹೆಚ್ಚು ಮಳೆ ದಾಖಲಾಗಿದ್ದು, 155 ಮಿಲಿ ಮೀಟರ್ ಮಳೆ ಸುರಿದಿದೆ. ಉಡುಪಿಯಲ್ಲಿ 130, ಕಾರ್ಕಳದಲ್ಲಿ 90 ಮಿಲಿ ಮೀಟರ್ ಮಳೆಯಾಗಿದೆ ಎಂದು ಉಡುಪಿ ಹವಾಮಾನ ಇಲಾಖೆ ತಿಳಿಸಿದೆ. ನಾಳೆ ಕೂಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ನಾಳೆ ಕೂಡ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೋರ್ಲಪಾಟಿ ಆದೇಶಿಸಿದ್ದಾರೆ.

holiday declared for schools and colleges of Udupi on July 24 due to rain

ಈವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಭಾರೀ ಗಾಳಿ, ಮಳೆ ಹಾಗೂ ಪೋಷಕರ ಒತ್ತಡದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ತಕ್ಷಣ ಮೌಖಿಕ ರಜೆ ಘೋಷಿಸಿದ್ದಾರೆ. ಅಲ್ಲದೆ ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+